Homeಕರ್ನಾಟಕಲೋಕಸಭೆ ಚುನಾವಣೆ| ಟಿಕೆಟ್‌ ವಂಚಿತರಾಗುವ ಸುಳಿವು ಕೊಟ್ಟ ಡಿ ವಿ ಸದಾನಂದಗೌಡ

ಲೋಕಸಭೆ ಚುನಾವಣೆ| ಟಿಕೆಟ್‌ ವಂಚಿತರಾಗುವ ಸುಳಿವು ಕೊಟ್ಟ ಡಿ ವಿ ಸದಾನಂದಗೌಡ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಅವರು ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿ ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಈ ಮೂಲಕ ತಮಗೆ ಟಿಕೆಟ್‌ ತಪ್ಪುವ ಸೂಚನೆ ಕೊಟ್ಟಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಡಿ ವಿ ಸದಾನಂದಗೌಡ ಪ್ರತಿನಿಧಿಸಿದ್ದರು.

ಅವರ ಪೋಸ್ಟ್‌ನಲ್ಲಿ ಏನಿದೆ?

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ,

ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ
ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು .
ಇಂತಿ ನಿಮ್ಮವನೇ ಆದ
ಡಿ.ವಿ. ಸದಾನಂದ ಗೌಡ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments