ಜೆಡಿಎಸ್ ಎನ್ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜ್ಯದಲ್ಲಿ ಕ್ಷೇತ್ರ ಹಂಚಿಕೆ ಅಂತಿಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ದಿಢೀರ್ ದೆಹಲಿಗೆ ತೆರಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ 20 ನಿಮಿಷಗಳ ಕಾಲ ಚರ್ಚೆ ನಡೆಸಿರುವ ಕುಮಾರಸ್ವಾಮಿ ಅವರು ಆರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆದ್ರೆ ಮೂರು ಕ್ಷೇತ್ರಗಳಿಗೆ ಸದ್ಯಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಮತ್ತು ಜೆಡಿಎಸ್ ತಾಲೀಮು ಆರಂಭಿಸಿವೆ. ಆದರೆ ಕ್ಷೇತ್ರ ಹಂಚಿಕೆ ವಿಚಾರವಾಗಿ ಅಮಿಶ್ ಶಾ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಂಡ್ಯ ವಿಚಾರದಲ್ಲಿ ಕುಮಾರಸ್ವಾಮಿ ಮೇಲುಗೈ ಸಾಧಿಸಿದ್ದಾರೆ ಎನ್ನಲಾಗುತ್ತಿದೆ.
ಸದ್ಯದ ಮಾಹಿತಿ ಪ್ರಕಾರ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್ಗೆ ಫಿಕ್ಸ್ ಎನ್ನುವ ಮಾಹಿತಿ ಲಭ್ಯವಾಗಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಗೃಹ ಸಚಿವರು ಹೈಕಮಾಂಡ್ ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.