Homeಕರ್ನಾಟಕಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ | ದೇಶದಲ್ಲಿ ಏಳು ಹಂತ, ರಾಜ್ಯದಲ್ಲಿ ಎರಡು ಹಂತಗಳ ಮತದಾನ,...

ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ | ದೇಶದಲ್ಲಿ ಏಳು ಹಂತ, ರಾಜ್ಯದಲ್ಲಿ ಎರಡು ಹಂತಗಳ ಮತದಾನ, ಜೂನ್ 4ಕ್ಕೆ ಫಲಿತಾಂಶ

ದೇಶದ ಕುತೂಹಲ ಕೆರಳಿಸಿರುವ ಲೋಕಸಭಾ ಮಹಾಸಮರಕ್ಕೆ ಅಖಾಡ ಸಿದ್ಧವಾಗಿದೆ. ಚುನಾವಣಾ ಆಯೋಗ ಒಟ್ಟು ಏಳು ಹಂತಗಳಲ್ಲಿ ಲೋಕಸಭೆಗೆ ಚುನಾವಣೆ ನಡೆಸಲು ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ.

ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಸುವ ದೃಷ್ಟಿಯಿಂದ ರಾಜ್ಯಗಳ ವರದಿ ಮತ್ತು ಕೇಂದ್ರ ಗುಪ್ತದಳದ ವರದಿಯನ್ನು ಆದರೆ ಏಳು ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26ಕ್ಕೆ ಮೊದಲ ಹಂತದ ಮತದಾನ, ಮೇ 7 ಕ್ಕೆ ಎರಡನೇ ಹಂತದ ಮತದಾನ ಎಂದು ಪ್ರಕಟಿಸಲಾಗಿದೆ.

ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ ಮತ್ತು ಉಡುಪಿ -ಚಿಕ್ಕಮಗಳೂರು ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಈ ಕ್ಷೇತ್ರಗಳ ಚುನಾವಣೆಗೆ ಮಾರ್ಚ್ 28ರಂದು ಅಧಿ ಸೂಚನೆ ಹೊರಡಿಸಲಾಗುತ್ತಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಏಪ್ರಿಲ್ ನಾಲ್ಕು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿದೆ.

ಏಪ್ರಿಲ್ 26ರಂದು ಮತದಾನ ನಡೆಯಲಿದ್ದು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 26ರಂದು ಮತದಾನ ಮಾಡಿದವರು ಫಲಿತಾಂಶಕ್ಕಾಗಿ ಸುಮಾರು ಒಂದು ತಿಂಗಳವರೆಗೆ ಕಾಯಬೇಕಾಗಿದೆ.

ಕರ್ನಾಟಕದ ಇನ್ನುಳಿದ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಈ ಕ್ಷೇತ್ರಗಳಿಗೆ ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟವಾಗಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಏಪ್ರಿಲ್ 22 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು ಮೇ 7ರಂದು ಮತದಾನ ನಡೆಯಲಿದೆ ಈ ಕ್ಷೇತ್ರಗಳ ಮತ ಎಣಿಕೆ ಕೂಡ ಜೂನ್ 4 ರಂದು ನಡೆಯಲಿದೆ.

ಒಟ್ಟಾರೆ ಲೋಕಸಭೆ ಚುನಾವಣೆ 7 ಹಂತ ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತದಲ್ಲಿ ಹ1 ಏಪ್ರಿಲ್ 19,ರಂದು 102 ಕ್ಷೇತ್ರಗಳು: ಹಂತ–2 ಏಪ್ರಿಲ್ 26, 89 ಕ್ಷೇತ್ರಗಳು: ಹಂತ–3 ಮೇ 7, 94 ಕ್ಷೇತ್ರಗಳು: ಹಂತ–4 ಮೇ 13, 96 ಕ್ಷೇತ್ರಗಳು: ಹಂತ– 5 ಮೇ 20, 49 ಕ್ಷೇತ್ರಗಳು: ಹಂತ– 6 ಮೇ 25, 57 ಕ್ಷೇತ್ರಗಳು: ಹಂತ– 7 ಜೂನ್ 1, 57 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಲ್ಲಾ ಕ್ಷೇತ್ರಗಳಿಗೂ ಒಮ್ಮೆಲೆ ಜೂನ್ 4ಕ್ಕೆ ನಡೆಯಲಿದೆ.

ಚುನಾವಣೆಯಲ್ಲಿ ಪಕ್ಷಗಳು ವೈಯಕ್ತಿಕ ದಾಳಿ ನಡೆಸದೇ, ಆರೋಗ್ಯಕರ ಸ್ಪರ್ಧೆಗೆ ಒತ್ತು ನೀಡಬೇಕು.ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳ ಬಳಕೆಗೆ ನಿಷೇಧ. ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ಮತದಾರರಿಗೆ ಯಾವುದೇ ರೀತಿಯ ಆಮೀಷಗಳನ್ನು ಒಡ್ಡುವಂತಿಲ್ಲ.  ಮತದಾರರನ್ನು ದಿಕ್ಕು ತಪ್ಪಿಸುವಂತೆ ಮಾಡುವ ಹಾಗಿಲ್ಲಹಣ ಬಲ, ತೋಳ್ಬಲವನ್ನು ಚುನಾವಣಾ ಅಕ್ರಮಗಳಿಗೆ ಬಳಿಸಿದರೆ ವಿರುದ್ಧ ಕಠಿಣ ಕ್ರಮ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ ಜರಗಿಸುವ ಎಚ್ಚರಿಕೆ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments