Homeಕರ್ನಾಟಕಲೋಕಸಭೆ ಚುನಾವಣೆ: ಶೇ.50 ರಷ್ಟು ಅಭ್ಯರ್ಥಿಗಳ ಆಯ್ಕೆ ಇಂದು ನಿರ್ಣಯ: ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆ: ಶೇ.50 ರಷ್ಟು ಅಭ್ಯರ್ಥಿಗಳ ಆಯ್ಕೆ ಇಂದು ನಿರ್ಣಯ: ಡಿ ಕೆ ಶಿವಕುಮಾರ್

ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿ, “ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಆಗುವುದಿಲ್ಲ. ಒಂದೆರಡು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡುತ್ತೇವೆ” ಎಂದರು.

“ಇಂದಿನ ಸಭೆಗೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಇಂದು ಬಸವ ಕಲ್ಯಾಣದಲ್ಲಿ ದೊಡ್ಡ ಕಾರ್ಯಕ್ರಮ ನಿಗದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಎಲ್ಲಾ ಮಠಾಧೀಶರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದನ್ನು ಮುಂದೂಡಲು ಸಾಧ್ಯವಿಲ್ಲ. ಇದು ಅದ್ಯತೆಯ ಕಾರ್ಯಕ್ರಮವಾದ್ದರಿಂದ ಸಿಎಂ ಅಲ್ಲಿ ಭಾಗವಹಿಸುತ್ತಿದ್ದಾರೆ. ನಾವುಗಳು ಸೇರಿ ಈಗಾಗಲೇ ಚರ್ಚೆ ಮಾಡಿರುವುದನ್ನು ನಾನು ಈ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ” ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನೋಡಿಕೊಂಡು ನೀವು ಅಭ್ಯರ್ಥಿಗಳ ಆಯ್ಕೆ ಮಾಡುತ್ತೀರಾ ಎಂದು ಕೇಳಿದಾಗ, “ಅವರ ರಾಜಕಾರಣಕ್ಕೂ ನಮ್ಮ ರಾಜಕಾರಣಕ್ಕೂ ಬಹಳ ವ್ಯತ್ಯಾಸವಿದೆ. ನಮ್ಮ ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಮೇಲೆ ರಾಜಕಾರಣ ನಡೆಯುವುದಿಲ್ಲ. ಪಕ್ಷ, ನಮ್ಮ ಗ್ಯಾರಂಟಿ ಯೋಜನೆಗಳ ಮೇಲೆ ನಾವು ರಾಜಕೀಯ ಮಾಡುತ್ತೇವೆ. ಅವರು ಅವರದೇ ಆದ ಲೆಕ್ಕಾಚಾರ ಇಟ್ಟುಕೊಂಡಿದ್ದರೆ, ನಾವು ನಮ್ಮದೇ ಲೆಕ್ಕಾಚಾರ ಇಟ್ಟುಕೊಂಡಿದ್ದೇವೆ” ಎಂದು ತಿಳಿಸಿದರು.

ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದವರಿಗೆ ಟಿಕೆಟ್ ನೀಡುತ್ತೀರಾ, ಸಚಿವರು ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರಾ ಎಂದು ಕೇಳಿದಾಗ, “ರಾಜಕೀಯದಲ್ಲಿ ಎಲ್ಲಾ ಸಾಧ್ಯತೆಗಳೂ ಇರುತ್ತವೆ” ಎಂದರು.

ಸುಪ್ರೀಂ ಕೋರ್ಟ್ ನಿಮಗೆ ರಿಲೀಫ್ ನೀಡಿದ್ದು, ನೊಟೀಸ್ ಬರುತ್ತಿಲ್ಲವೇ ಎಂದು ಕೇಳಿದಾಗ, “ಇನ್ನೂ ನೋಟಿಸ್ ಬರುತ್ತಿವೆ. ಮಾಧ್ಯಮಗಳು ಹಗಲು ರಾತ್ರಿ ನನ್ನನ್ನು ಕಾಯುತ್ತಾ ಕೆಲಸ ಮಾಡಿವೆ. ಹೆರಿಗೆ ನೋವು ಅನುಭವಿಸಿದವರಿಗೆ ಗೊತ್ತು ಎಂಬಂತೆ, ನನ್ನ ನೋವು ನನಗೆ ಗೊತ್ತು. ರಾಜ್ಯದ ಜನ ನನ್ನ ಪರವಾಗಿ ಹೋರಾಟ ಮಾಡಿದರು. ಪ್ರಾರ್ಥನೆ ಮಾಡಿದರು. ಈಗ ಅವರಿಗೆ ಸಮಾಧಾನ ಆಗಿದೆಯಲ್ಲ ಅಷ್ಟೇ ಸಾಕು” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments