ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಂದ್ರಕಾಂತ ಬೆಲ್ಲದ ಅಭಿನಂದನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ “ಅಲ್ಲಮಲೋಕ”, ” ದೊಡ್ಡಹೊಳೆ ದಾಟಿದವರು” ಹಾಗೂ “ಬೆಲ್ಲದಚ್ಚು” ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.
ಡಂಬಳದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಭಾಲ್ಕಿಯ ಡಾ.ಬಸವಲಿಂಗ ಪಟ್ಟದೇವರು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೋ.ರು.ಚನ್ನಬಸಪ್ಪ ವಹಿಸಿದ್ದರು.
ಕಾರ್ಮಿಕ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಂತೋಷ್ ಲಾಡ್, ಲೀಲಾವತಿ ಬೆಲ್ಲದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ ಅರವಿಂದ ಬೆಲ್ಲದ, ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ ಮಾನೆ , ಮಹೇಶ್ ಟೆಂಗಿನಕಾಯಿ ಉಪಸ್ಥಿತರಿದ್ದರು.
ಸಾಹಿತಿಗಳಾದ ನಾ.ಮೊಗಸಾಲೆ, ಡಾ.ಶಂಭು ಬಳಿಗಾರ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಅಭಿನಂದನ ಗ್ರಂಥದ ಸಂಪಾದಕಾರದ ಸಾಹಿತಿ ರಂಜಾನ್ ದರ್ಗಾ, ಇತರೆ ಗ್ರಂಥಗಳ ಸಂಪಾದಕರಾದ ಪ್ರೊ ಶಶಿಧರ ತೋಡಕರ, ದಿವಾಕರ ಹೆಗಡೆ ಮತ್ತು ಚಿತ್ರಕಲಾವಿದ ಚಂದ್ರು ಗಂಗೊಳ್ಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.