Homeಕರ್ನಾಟಕIAS ಸೇರಿ ಮೂವರು ಅಧಿಕಾರಿ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳ ದಾಳಿ

IAS ಸೇರಿ ಮೂವರು ಅಧಿಕಾರಿ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳ ದಾಳಿ

ಕರ್ನಾಟಕದ ಹಲವೆಡೆ ಬುಧವಾರ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು ಮೈಸೂರು, ಕೊಪ್ಪಳ ಹಾಗೂ ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ.

IAS ಸೇರಿ ಮೂವರು ಅಧಿಕಾರಿ ಮನೆ ಮೇಲೆ ದಾಳಿ

ಬೆಂಗಳೂರಿನಲ್ಲಿ ಐಎಎಸ್​ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾ ದಾಳಿ ಮಾಡಿದೆ. ಆರ್​.ಟಿ.ನಗರದಲ್ಲಿರುವ ಹಿರಿಯ IAS ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ

ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ.

ಅದೇ ರೀತಿಯಾಗಿ ಮೈಸೂರಿನ ಸಾತಗಳ್ಳಿಯ ಜೆಪಿನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪ ಕೇಳಿಬಂದಿದೆ.

ಬಳ್ಳಾರಿಯಲ್ಲಿ ಮೂರು ಕಡೆ ದಾಳಿ

ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ. ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಬೆಂಗಳೂರು ನಿವಾಸಿಯಾಗಿರುವ ಅಧಿಕಾರಿ ಮಾರುತಿ ಬಗಲಿ ವಿರುದ್ಧ ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ.

ಇನ್ನು ಕೊಪ್ಪಳ ನಗರದಲ್ಲೂ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಮಲಗಿದ್ದ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿದೇರ್ಶಕ ಶೆಕು ಚವ್ಹಾಣ್​ಗೆ ಶಾಕ್ ನೀಡಿದ್ದಾರೆ. ಲೋಕಾ ಅಧಿಕಾರಿಗಳನ್ನು ಶೆಕು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ. ​

ಹೊಸಪೇಟೆಯ ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಅವರ ಕಡ್ಡಿರಾಂಪುರದಲ್ಲಿರುವ ಮನೆ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ರಜನಿ ಅವರ ಅಳಿಯ ಮಾರುತಿ ಅವರು ಬೆಂಗಳೂರು ಬಿಬಿಎಂಪಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಅತ್ತೆಯವರ ಮನೆ ಮೇಲೆ ಈ ದಾಳಿ ನಡೆದಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುನೀಲ ಮೇಗಳಮನಿ ನೇತೃತ್ವದಲ್ಲಿ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಶೇಕು ಚವ್ಹಾಣ್​ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments