Homeಕರ್ನಾಟಕಅಕ್ರಮ ಆಸ್ತಿ ಆರೋಪ, ರಾಜ್ಯದ ಹಲವಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಆರೋಪ, ರಾಜ್ಯದ ಹಲವಡೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮತ್ತು ಆಸ್ತಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಾಸನ ‌ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್‌ನಲ್ಲಿರುವ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಕೊಡಗು ಜಿಲ್ಲೆ ಕುಶಾಲನಗರದ ಫಾರ್ಮ್‌ಹೌಸ್ ಮೇಲೂ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಲೋಕಾಯುಕ್ತ ಎಸ್​​​ಪಿ ಸ್ನೇಹ ನೇತೃತ್ವದಲ್ಲಿ ದಾಳಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಎಇ ಎಂ ಆಂಜನೇಯಮೂರ್ತಿ ಅವರ ಮನೆ ಮೇಲೆ ಹಾಗೂ ಬೆಂಗಳೂರಿನ ಯಲಹಂಕ‌ ನ್ಯೂ ಟೌನ್, ತುಮಕೂರು, ಗೌರಿಬಿದನೂರು ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತರ ಅಧಿಕಾರಿಗಳ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಬೆನ್ನಲ್ಲಿ ಈ ದಾಳಿ ನಡೆದಿದ್ದು, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಕಚೇರಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು THO ಡಾ. ಟಿ. ವೆಂಕಟೇಶ್ ಅವರ ಮನೆ, ಕ್ಲಿನಿಕ್, ಹಾಗೂ ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್ ಮೇಲೆ ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆಯುತ್ತಿದ್ದು, ಲೋಕಾಯುಕ್ತ SP ವಾಸುದೇವ್ ರಾಮ್​ ಮತ್ತು DYSP ಮೃತ್ಯುಂಜಯ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments