Homeಕರ್ನಾಟಕರಾಮಚಂದ್ರ ಗುಹಾ ಅವರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ರಾಮಚಂದ್ರ ಗುಹಾ ಅವರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ ಸರಕಾರ ಆಯ್ಕೆ ಮಾಡಿದೆ.

ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರತಿ ವರ್ಷ ಈ ಗೌರವಾನ್ವಿತ ಪ್ರಶಸ್ತಿ ನೀಡುತ್ತದೆ.

“ರಾಷ್ಟ್ರಪಿತ ಮಹಾತ್ಮಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಆಚರಿಸಲು ರಾಜ್ಯ ಸರಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಆಚರಣೆಯ ಅಂಗವಾಗಿ ಗಾಂಧೀಜಿಯವರ ತತ್ವ ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರವಹಿಸಿರುವ ಡಾ.ರಾಮಚಂದ್ರ ಗುಹಾ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ” ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments