ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿನ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.
ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳ ಮೂಲಕ ಸತ್ಯ ಹೊರಬರುವುದಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುವ ತನಿಖೆ ಮಾತ್ರ ವಿಶ್ವಾಸಾರ್ಹವಾಗಿರುತ್ತದೆ ಎಂದು ತಿಳಿಸಿದ್ದಾರೆ.
“ನಾವು ಸುಪ್ರೀಂ ಕೋರ್ಟ್ ಅನ್ನು ಮಾತ್ರ ನಂಬುತ್ತೇವೆ. ಇತರ ಎಲ್ಲ ಸಂಸ್ಥೆಗಳು ಸಂಪೂರ್ಣವಾಗಿ ರಾಜಿ ಮಾಡಿಕೊಂಡಿವೆ” ಎಂದು ಅವರು ಸಿಂಗೂರ್ಗೆ ತೆರಳುವ ಮೊದಲು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯ ಬಾರಾಮತಿ ಬಳಿ ವಿಮಾನ ಅಪಘಾತಕ್ಕೀಡಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಮತ್ತು ಇತರ ನಾಲ್ವರು ಸಾವಿಗೀಡಾಗಿದ್ದಾರೆ.


