ಶೂಗಳಲ್ಲಿ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ 6.3 ಕೋಟಿ ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ)ದ ಅಧಿಕಾರಿಗಳು ನಗರದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಬಂಧಿತ ಪ್ರಯಾಣಿಕ ಶೂಗಳಲ್ಲಿ 6.3 ಕೋಟಿ ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದು, ಖಚಿತವಾದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿನ್ನದ ಕಳ್ಳಸಾಗಣೆ ಸಿಂಡಿಕೇಟ್‌ನ ಭಾಗವಾಗಿದ್ದ ಸಂಭಾವ್ಯ ಖರೀದಿದಾರನನ್ನು ಕೂಡ ಬಂಧಿಸಲಾಗಿದೆ. ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಬ್ಯಾಂಕಾಕ್‌ನಿಂದ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ತಡೆದಿದ್ದಾರೆ.
ಶೋಧದ ವೇಳೆ ಶೂಗಳಲ್ಲಿ ಅಡಗಿಸಿಟ್ಟಿದ್ದ 6.3 ಕೋಟಿ ಮೌಲ್ಯದ 6.7 ಕೆ.ಜಿ ಚಿನ್ನದ ಗಟ್ಟಿಗಳು ಪತ್ತೆಯಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆತನ ವಿಚಾರಣೆ ವೇಳೆ ಸಂಭಾವ್ಯ ಖರೀದಿದಾರನ ಹೆಸರು ಬಾಯ್ಬಿಟ್ಟಿದ್ದು ಆತನನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.