ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಿಲ್ಲುವುದು ಬಹುತೇಕ ಖಚಿತವಾದಂತೆ ಕಾಣುತ್ತಿದೆ.
ಜೆಡಿಎಸ್ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ ಕುತೂಹಲಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪರೋಕ್ಷವಾಗಿ ತೆರೆ ಎಳೆದಿದ್ದಾರೆ.
ಅಭ್ಯರ್ಥಿ ಆಯ್ಕೆ ಸಂಬಂಧ ಶುಕ್ರವಾರ ಮಂಡ್ಯದಲ್ಲಿ ಕುಮಾರಸ್ವಾಮಿ, ಜೆಡಿಎಸ್ ನಾಯರು, ಮುಖಂಡರ ಜೊತೆ ಸಭೆ ಮಾಡಿದ್ದು, ಸಭೆಯಲ್ಲಿ ಎಲ್ಲ ನಾಯಕರು ನಿಖಿಲ್ ಅವರೇ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದ್ದಾರೆ” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
”ನಿಮಗೆ ನಿಖಿಲ್ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ಅವನನ್ನು ಒಪ್ಪಿಸುವ ಕೆಲಸ ಮಾಡುವೆ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ” ಎಂದಿದ್ದಾರೆ.
“ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ಆದ್ದರಿಂದ ಮಾರ್ಚ್ 25ರಂದು ಮಂಡ್ಯಕ್ಕೆ ಬಂದು ಅಭ್ಯರ್ಥಿ ಘೋಷಿಸುತ್ತೇನೆ” ಎನ್ನುವ ಮೂಲಕ ಪರೋಕ್ಷವಾಗಿ ನಿಖಿಲ್ ಅವರನ್ನೇ ಮಂಡ್ಯದಿಂದ ಕಣಕ್ಕಿಳಿಸುತ್ತೇನೆ ಎಂದು ಹೇಳಿದ್ದಾರೆ.
ಇದೀಗ ಅಂತಿಮವಾಗಿ ಮಂಡ್ಯದಿಂದ ನಿಖಿಲ್ ಸ್ಪರ್ಧೆ ಕುಮಾರಸ್ವಾಮಿ ಖಚಿತಪಡಿಸಿದ್ದು, ಮತ್ತೆ ಮಂಡ್ಯ ರಾಜಕಾರಣ ರಂಗೇರಲಿದೆ.