Homeಕರ್ನಾಟಕಎಂಎಲ್‌ಸಿ ಸ್ಥಾನಕ್ಕೆ ಜೆಡಿಎಸ್‌ನ ಮರಿತಿಬ್ಬೇಗೌಡ ರಾಜೀನಾಮೆ

ಎಂಎಲ್‌ಸಿ ಸ್ಥಾನಕ್ಕೆ ಜೆಡಿಎಸ್‌ನ ಮರಿತಿಬ್ಬೇಗೌಡ ರಾಜೀನಾಮೆ

ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಗುರುವಾರ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ.

“ಎಲ್ಲವನ್ನು ಪ್ರಶ್ನೆ ಮಾಡಿದ್ದೇನೆ. ಮರಿತಿಬ್ಬೇಗೌಡರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ” ಎಂದು ಸಭಾಪತಿಗಳು ತಿಳಿಸಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮರಿತಿಬ್ಬೇಗೌಡ, “ಜನತಾದಳದ ವರಿಷ್ಠ ಹೆಚ್​ ಡಿ ದೇವೆಗೌಡ, ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಅವರು ನಮಗೆ ಸರಿಯಾಗಿ ಸ್ಪಂದಿಸಲಿಲ್ಲ. ನಿಷ್ಠಾವಂತರನ್ನು ಕಡೆಗಣನೆ ಮಾಡಿದ್ದಾರೆ. ಇದರಿಂದ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು” ಎಂದರು.

“ಜನತಾ ದಳದಿಂದ ಎರಡು ಬಾರಿ ಟಿಕೆಟ್ ಪಡೆದಿದ್ದೆ. ಎರಡು ಬಾರಿ ಜನತಾದಳದಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದೆ. ಈ ಅವಧಿಯಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಆಗಿದ್ದೆ. ನನ್ನ ರಾಜಕೀಯ ಪ್ರಾರಂಭವಾಗಿದ್ದು ಜನತಾ ದಳದಿಂದ. ಕೆಲವು ಸಲ ವಿಧಾನ ಪರಿಷತ್ ಹಾಗೂ ವಿಧಾನಸಭೆ ಟಿಕೆಟ್ ನನಗೆ ಸಿಗಲಿಲ್ಲ” ಬೇಸರ ಹೊರಹಾಕಿದರು.

“ನಾನು ಶಿಕ್ಷಕ ಬಂಧುಗಳ ಜೊತೆ ಸಮಾಲೋಚನೆ ಮಾಡಿ ನಿರ್ಧಾರ ಮಾಡಿದ್ದೇನೆ. ಎಲ್ಲರೂ ಪಕ್ಷ ಬಿಡಿ ಎಂದು ಅಭಿಪ್ರಾಯ ಸೂಚಿಸಿದ್ದಾರೆ. ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ಶೀಘ್ರವೇ ನನ್ನ ಮುಂದಿನ ನಡೆ ತಿಳಿಸಲಾಗುವುದು” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments