Homeಕರ್ನಾಟಕಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆ ವಿಲೀನ

ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆ ವಿಲೀನ

ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಹೊಸ ಇಲಾಖೆಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿದ್ದಾರೆ. ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ಸೂಚನೆ ನೀಡಲಾಗಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು. ಇದು ರಾಜ್ಯ ಸರ್ಕಾರ ಮುಜುಗರಗೊಳ್ಳುವಂತೆ ಮಾಡಿತ್ತು. ಬಳಿಕ, ಡಿಸೆಂಬರ್​ 6 ರಂದು ನಡೆದ ಸಂಪುಟ ಸಭೆಯಲ್ಲಿ ಎರಡೂ ಇಲಾಖೆ ವಿಲೀನಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಸರ್ಕಾರ ಎರಡೂ ಇಲಾಖೆಗಳನ್ನು ವಿಲೀನಗೊಳಿಸಿ ಆದೇಶ ಹೊರಡಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಕಾರ್ಯವೈಖರಿಗಳು ಬಹುತೇಕ ಒಂದೇ ರೀತಿಯಲ್ಲಿರುವುದರಿಂದ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ರಾಜಸ್ಥಾನ, ಮಹಾರಾಷ್ಟ್ರ, ತಮಿಳನಾಡು, ಉತ್ತರ ಪ್ರದೇಶ, ಗುಜರಾತ್​, ಅಸ್ಸಾಂ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಈಗಾಗಲೇ ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗಳನ್ನು ವಿಲೀನಗೊಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments