Homeಕರ್ನಾಟಕಸರಳ, ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್: ಸಿದ್ದರಾಮಯ್ಯ

ಸರಳ, ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್: ಸಿದ್ದರಾಮಯ್ಯ

ಸರಳ, ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿಂದ್ ಮಜ್ದೂರ್, ಕಿಸಾನ್ ಪಂಚಾಯತ್ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಮಿಕ ನಾಯಕ, ಮಾಜಿ ಶಾಸಕ ಮೈಕೆಲ್ ಫರ್ನಾಂಡೀಸ್ ಅವರ 92ನೇ ಜನ್ಮ ದಿನದ ಅಂಗವಾಗಿ ಆಯೋಜಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮೈಕೆಲ್ ಮತ್ತು ಪತ್ನಿ ಡೋನಾ ಫರ್ನಾಂಡೀಸ್ ಅವರನ್ನು ಸನ್ಮಾನಿಸಿ ಮಾತನಾಡಿದರು.

ಇಂತಹ ಸಮಾಜವಾದಿ ವ್ಯಕ್ತಿ ಮತ್ತು ವ್ಯಕ್ತಿತ್ವಗಳು ಬಹಳ ಅಪರೂಪ. ಕಾರ್ಮಿಕ ಸಚಿವರಾಗುವ ಅವಕಾಶ ಮನೆ ಬಾಗಿಲಿಗೆ ಹುಡುಕಿಕೊಂಡು ಹೋದರೂ, ಸಚಿವರಾಗಿ ಕಾರ್ಮಿಕರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಸಚಿವ ಸ್ಥಾನ ತಿರಸ್ಕರಿಸಿ ಹೋರಾಟ ಮಾರ್ಗದಲ್ಲೇ ಮುಂದುವರೆದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಲಿತರು, ರೈತರು, ಕಾರ್ಮಿಕರ ಹಿತಸಕ್ತಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ನಾನು ಕಾರ್ಯಕ್ರಮಕ್ಕೆ ಬಂದಿದ್ದೇನೆ. ಹೋರಾಟ ರಾಜಕಾರಣದಲ್ಲಿ ಅತೀ ಅಪರೂಪದ ವ್ಯಕ್ತಿತ್ವ ಮೈಕೆಲ್ ದಂಪತಿಯವರದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments