Homeಕರ್ನಾಟಕಸಿದ್ದರಾಮಯ್ಯನವರಿಗೆ ಸಚಿವ ಬಿ. ನಾಗೇಂದ್ರ ವಿಚಾರದಲ್ಲಿ ರೋಷಾವೇಶ ಯಾಕಿಲ್ಲಾ: ಬೊಮ್ಮಾಯಿ ಪ್ರಶ್ನೆ

ಸಿದ್ದರಾಮಯ್ಯನವರಿಗೆ ಸಚಿವ ಬಿ. ನಾಗೇಂದ್ರ ವಿಚಾರದಲ್ಲಿ ರೋಷಾವೇಶ ಯಾಕಿಲ್ಲಾ: ಬೊಮ್ಮಾಯಿ ಪ್ರಶ್ನೆ

ನಮ್ಮ ಸರ್ಕಾರ ಅವಧಿಯಲ್ಲಿ ಗುತ್ತಿಗೆದಾರ ಸಾವಿನ ವಿಚಾರದಲ್ಲಿ ಈಶ್ವರಪ್ಪನವರದ್ದೇನು ಕೂಡ ತಪ್ಪಿರಲಿಲ್ಲ ಆದರೂ, ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಶ್ವರಪ್ಪ ಅವರ ವಿಚಾರದಲ್ಲಿ ವಿಪಕ್ಷನಾಯಕರಿದ್ದ ಸಿದ್ದರಾಮಯ್ಯನವರು ಮಾಡಿದ ರೋಷಾವೇಶ ಈಗ ಸಚಿವ ಬಿ. ನಾಗೇಂದ್ರ ವಿಚಾರದಲ್ಲಿ ಯಾಕಿಲ್ಲಾ ಎಂದು ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಪ್ರಶ್ನಿಸಿದರು.

ಹೊಸಪೇಟೆಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ” ಎಂದು ವಾಗ್ದಾಳಿ ನಡೆಸಿದರು.

“ನೈತಿಕತೆ ಇದ್ದರೆ ಸಿಎಂ ಅವರು ಸಚಿವರ ರಾಜೀನಾಮೆ ತೆಗೆದುಕೊಳ್ಳಲಿ. ಇದೊಂದು ಭ್ರಷ್ಟಾಚಾರ ಕೂಟದ ಸರ್ಕಾರ. ಈ ಪ್ರಕರಣಕ್ಕೂ, ಈಶ್ವರಪ್ಪನವರ ಪ್ರಕರಣಕ್ಕೂ ಹೊಂದಾಣಿಕೆ ಮಾಡುತ್ತಾರೆ, ನಾಚಿಕೆಯಾಗಬೇಕು ಇವರಿಗೆ” ಎಂದರು.

“ಬಹುಕೋಟಿ ಹಗರಣ ಇದು, ಒಂದೇ ದಿನದಲ್ಲಿ 14 ಅಕೌಂಟ್ ಗೆ ಮಾಯ ಆಗುತ್ತದೆ. ಅಂದರೆ ಸಂಶಯಾಸ್ಪದ ಅಕೌಂಟ್ ಗಳಿಗೆ ಹೋಗಿದೆ. ಇದು ಸಿಬಿಐ ಗೆ ಹೋಗುವಂತಹ ಮುಖ್ಯವಾದ ಕೇಸ್. ಒಂದು ಬ್ಯಾಂಕ್ ಮುಖಾಂತರ ಬೇರೆ ರಾಜ್ಯಕ್ಕೆ ಹಣ ಹೋಗಿದೆ. 10 ಕೋಟಿಗೆ ಹೆಚ್ಚು ಹಗರಣ ಅವ್ಯವಹಾರ ಆಗಿದ್ದರೆ,, ಅದು ಸಿಬಿಐ ತನಿಖೆಗೆ ಹೋಗಬೇಕು ಅಂತ ಇದೆ. ಆದರೆ, ಇವರು ಯಾಕೆ ಸಿಬಿಐಗೆ ಕೊಡುತ್ತಿ” ಎಂದು ಪ್ರಶ್ನಿಸಿದರು.

ಕಾನೂನು ಎಲ್ಲರಿಗೂ ಒಂದೆ

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಎಸ್ಐಟಿ ತನಿಖೆಯಾಗುತ್ತಿದೆ, ಪ್ರಕರಣ ತನಿಖೆ ಹಂತದಲ್ಲಿದೆ. ಅಪರಾಧ ಮಾಡಿದವರು, ಶೋಷಣೆ ಮಾಡಿದವರು, ಅದನ್ನು ಪ್ರಚಾರ ಮಾಡಿದವರು ಎಲ್ಲಾ ವಿಚಾರದಲ್ಲಿ ಕಾನೂನು ಇದೆ ತನಿಖೆ ನಡೆಯುತ್ತಿದೆ ಕಾನೂನು ಎಲ್ಲರಿಗೂ ಒಂದೇ” ಎಂದರು.

ಕಾನೂನು ಸುವ್ಯವಸ್ಥೆ ಹಾಳಾಗಿದೆ

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ. ನಮ್ಮ ಮಕ್ಕಳು ಶಾಲೆ, ಕಾಲೇಜ್ ಗೆ ಹೋದರೆ ಸುರಕ್ಷಿತವಾಗಿ ವಾಪಾಸ್ ಬರುತ್ತಾರೆ ಅನ್ನುವ ನಂಬಿಕೆ ಇಲ್ಲಾ. ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲಾ. ರಾಜ್ಯದಲ್ಲಿ ಸಾಮೂಹಿಕ ಕೊಲೆಗಳು ಆಗುತ್ತಿವೆ. ಒಂದೇ ಸಮಯಕ್ಕೆ ಮೂರು ನಾಲ್ಕು ಜನರ ಕೊಲೆ ಆಗುತ್ತಿವೆ. ಸಮಾಜಘಾತುಕರಿಗೆ ಹೆದರಿಕೆ ಇಲ್ಲಾ, ಅವರಿಗೆ ಪೊಲೀಸ್ ಠಾಣೆಗಳಲ್ಲಿ ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ಆ ಕಾರಣಕ್ಕೆ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ” ಎಂದು ಆರೋಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments