Homeಕರ್ನಾಟಕವಿಜಯಪುರಕ್ಕೆ ಬಸ್‌ನಲ್ಲಿ ಪ್ರಯಾಣಿಸಿ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ

ವಿಜಯಪುರಕ್ಕೆ ಬಸ್‌ನಲ್ಲಿ ಪ್ರಯಾಣಿಸಿ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ

ಸಚಿವ ಕೃಷ್ಣ ಬೈರೇಗೌಡ ಸದಾ ಸಾಮಾನ್ಯ ಜನರಂತೆ ಇರುಲು ಪ್ರಯತ್ನಿಸಿ, ತಮ್ಮ ಭಿನ್ನ ಕೆಲಸ ಕಾರ್ಯಗಳ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಶುಕ್ರವಾರ ರಾತ್ರಿ ಕಾರ್ ತೊರೆದು ಸಾಮಾನ್ಯ ನಾಗರಿಕರಂತೆ ಬಸ್ಸಿನ ಮೂಲಕ ವಿಜಯಪುರಕ್ಕೆ ಪ್ರಯಾಣ ಮಾಡಿ ಗಮನ ಸೆಳೆದಿದ್ದಾರೆ.

ಇಲಾಖೆಯ ಕೆಲಸದ ನಿಮಿತ್ತ ಕೃಷ್ಣ ಬೈರೇಗೌಡ ಅವರು ಬೆಂಗಳೂರಿನಿಂದ ವಿಜಯಪುರಕ್ಕೆ ಕಲ್ಯಾಣ ರಥ ಬಸ್‌ನಲ್ಲಿ ತೆರಳಿದ್ದಾರೆ. ಸಾಮಾನ್ಯವಾಗಿ ಪಕ್ಕದ ಜಿಲ್ಲೆಗೆ ಹೋಗಬೇಕಾದರೆ ವಿಮಾನದ ಮೂಲಕ ಪ್ರಯಾಣ ಮಾಡಿ ನಂತರದಲ್ಲಿ ಕಾರ್‌ನಲ್ಲಿ ರಸ್ತೆಯ ಮೂಲಕ ಸಚಿವರು ತೆರಳುವುದು ಸಾಮಾನ್ಯ.

ಆದರೆ ಕೃಷ್ಣ ಬೈರೇಗೌಡ‌ ಹಠಾತ್ ಕಾರ್ ತೊರೆದು ಬಸ್‌ ನಲ್ಲಿ ಪ್ರಯಾಣ ಮಾಡುವ ಮೂಲಕ ಗಮನ ಸೆಳೆದರು. ವಿಜಯಪುರಕ್ಕೆ ಶನಿವಾರ ಬಂದಿಳಿದಾಗ ಸ್ಥಳೀಯ ಅಧಿಕಾರಿಗಳು ಮತ್ತು ಆಪ್ತರು ಪುಸ್ತಕ ನೀಡಿ ಜಿಲ್ಲೆಗೆ ಸ್ವಾಗತಿಸಿದರು.

ವಿಭಿನ್ನ ಕಾರ್ಯವೈಖರಿ ಮೂಲಕ ಗಮನ ಸೆಳೆಯುತ್ತಿರುವ ಸಚಿವ ಕೃಷ್ಣ ಬೈರೇಗೌಡರು ಕಂದಾಯ ಇಲಾಖೆಯ ಕಚೇರಿಗಳಿಗೆ ದಿಢೀರ್ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ತಮ್ಮ ಇಲಾಖೆಯ ಕೆಲಸ ಕಾರ್ಯಗಳಿಗೂ ವೇಗ ನೀಡುತ್ತಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ಹಾಗೂ ಕೆಲಸ ಮಾಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಕೆಲಸವನ್ನೂ ಮಾಡುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ವಿಧಾನಸೌಧದಲ್ಲಿ ನಡೆದಿದ್ದ ಕಂದಾಯ ಇಲಾಖೆಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದ್ದರು. ಒಂದೂವರೆ ವರ್ಷದಲ್ಲಿ 26 ಲಕ್ಷ ಸರ್ವೇ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದಕ್ಕೆ ಸಚಿವರಿಗೆ ಅಭಿನಂದಿಸಿದ್ದರು.

“ಕಂದಾಯ ಇಲಾಖೆ ರಾಜ್ಯ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಚಿವ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ. ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ನಾಲಗೆ ತುದಿಯಲ್ಲಿ ಅಂಕಿ – ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿಯಾಗಿದ್ದಾರೆ” ಎಂದು ಹಾಡಿ ಹೊಗಳಿದ್ದನ್ನು ಇಲ್ಲಿ ಗಮನಿಸಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments