Homeಕರ್ನಾಟಕಕಳಸ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

ಕಳಸ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಸಚಿವ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕೋರಿದರು.

ಅವರು ಇಂದು ಕಳಸದಲ್ಲಿರುವ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಶಾಸಕರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಉಡುಪಿಯಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದಾಗ ಮಾರ್ಗದ ಮಧ್ಯೆ ಕಳಸದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಚಿವರಿಗೆ ಅದ್ದೂರಿ ಸ್ವಾಗತ ನೀಡಿದರು. ಬಳಿಕ ಮಾತನಾಡಿದ ಸಚಿವರು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ಆಯಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗುವಂತೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯೋಣ ಎಂದು ಕರೆ ನೀಡಿದರು.

ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಕಾರ್ಯಕರ್ತರು ಸನ್ಮಾನಿಸಿದರು. ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಯಾಣಿಕ, ಸ್ಥಳೀಯ ಮುಖಂಡರಾದ ವೀರೇಂದ್ರ, ಶಂಸುದ್ದೀನ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments