ರಾಜ್ಯದಲ್ಲಿ ಎಲ್ಲ ಇಲಾಖೆಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯಗಳಿಗೆ ಮಾಡಬೇಕಾದ ಸಾಕಷ್ಟು ಕೆಲಸಗಳ ಕುರಿತು ಸೂಕ್ತ ಅಧ್ಯಯನ ನಡೆಸಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ SCSP/TSP ಅನುದಾನದ ಬಳಕೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳ ಅಧಿಕಾರಿಗಳ ಸಭೆಯನ್ನು ಸಚಿವರು ಬುಧವಾರ ನಡೆಸಿದರು.
“SCSP/TSP ಅನುದಾನವನ್ನು ಪಡೆದುಕೊಳ್ಳುವ ನೋಡಲ್ ಏಜೆನ್ಸಿಗಳು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಬೇಕು. ಆಯಾ ವರ್ಷದ ಅವಧಿಯ ಅನುದಾನವನ್ನು ಆಯಾ ವರ್ಷವೇ ಖರ್ಚು ಮಾಡುವ ಮೂಲಕ ಅವರ ಅಭಿವೃದ್ಧಿಗೆ ಶ್ರಮಿಸಬೇಕು” ಎಂದು ಸಭೆಯಲ್ಲಿ ಸಚಿವರು ತಿಳಿಸಿದರು.