ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ ಕೆಎಸ್‌ಡಿಎಲ್ ಉತ್ಪಾದನೆಯಲ್ಲಿ ತೊಡಗಿ ಲಾಭದಾಯಕವಾಗಿ ಪ್ರಗತಿ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಮತ್ತು ಮಾರ್ಜಕ ನಿಯಮಿತದ 21ನೂತನ ವೈವಿದ್ಯಮಯ ಉತ್ಪನ್ನಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು, “ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಸಂಸ್ಥೆಗಳ ಜತೆ ಪೈಪೋಟಿ ಮಾಡುವಂತಹ ಗುಣಮಟ್ಟವನ್ನು ನಾವು ಕಾಪಾಡಿ ಕೊಳ್ಳಬೇಕು. ಇದರಲ್ಲಿ ಕೆಎಸ್‌ಡಿಎಲ್ ಯಶಸ್ಸು ಗಳಿಸಿದೆ. ಸಚಿವ ಎಂ.ಬಿ.ಪಾಟೀಲ್ ಅವರು ಕೆಎಸ್‌ಡಿಎಲ್ ನ ಘನತೆ ಹೆಚ್ಚಿಸಿ ಲಾಭದಾಯಕ ಪ್ರಗತಿ ಕಾಣಿಸಿದ್ದಾರೆ” ಎಂದು ಮೆಚ್ಚುಗೆ ಸೂಚಿಸಿದರು.
ಸರ್ಕಾರಿ ಸಂಸ್ಥೆ ಮತ್ತು ಸರ್ಕಾರಿ ಕಾರ್ಖಾನೆ ಎಂದರೆ ಯಾರೂ ಮೂಗು ಮುರಿಯದಂತಹ ರೀತಿಯಲ್ಲಿ ಪ್ರಗತಿ ಕಾಣಿಸಿ ಮಾದರಿಯಾಗಿ ಕೆಎಸ್‌ಡಿಎಲ್ ಬೆಳವಣಿಗೆ ಕಂಡಿರುವುದಕ್ಕೆ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದಿಸಿ, ಕೆಎಸ್‌ಡಿಎಲ್ ಸಂಸ್ಥೆಯ ಉತ್ಪನ್ನಗಳನ್ನು ನಕಲು ಮಾಡುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಇದೇ ಸಂದರ್ಭದಲ್ಲಿ ಸಿಎಂ ಸೂಚಿಸಿದರು.
ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.