Homeಕರ್ನಾಟಕ371ಜೆ ಅಡಿ ನೇಮಕಾತಿ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

371ಜೆ ಅಡಿ ನೇಮಕಾತಿ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ 371ಜೆ ಸಂಪುಟ ಉಪ ಸಮಿತಿ ಅಧ್ಯಕ್ಷ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ಬುಧವಾರ ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಜೊತೆಯಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜೊತೆ ಉದ್ಯೋಗ ನೇಮಕಾತಿಗೆ ಸಂಬಂಧಪಟ್ಟಂತೆ ಸಭೆ ನಡೆಯಿತು.

“ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ವಿಷಯದಲ್ಲಿ ಪದೇ ಪದೇ ಕೆಲವಾರು ಗೊಂದಲಗಳು ಉದ್ಭವಿಸುತ್ತಿರುವದರಿಂದ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ, ಅಂತಿಮವಾಗಿ ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಚರ್ಚೆ ಮಾಡುವ ಸಂಬಂಧ ಸಲ್ಲಿಸಬೇಕು” ಎಂದು ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಡಿ.ರಣ್‌ದೀಪ್‌, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಕೆ.ರಾಕೇಶ್‌ ಕುಮಾರ್‌, ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments