Homeಕರ್ನಾಟಕಗ್ರಾಮ ಪಂಚಾಯತಿ ನೌಕರರ ಸೇವಾ ಭದ್ರತೆಗೆ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮ ಪಂಚಾಯತಿ ನೌಕರರ ಸೇವಾ ಭದ್ರತೆಗೆ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

‌ಗ್ರಾಮ ಪಂಚಾಯತಿ ನೌಕರರ ಸೇವಾ ಭದ್ರತೆ, ಸೇರಿದಂತೆ ಹಲವು ಬೇಡಿಕೆಗಳನ್ನುಈಡೇರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಸಾಧ್ಯವಾದಷ್ಟು ಸೌಲಭ್ಯಗಳನ್ನು ನೀಡಲು ಪ್ರಯತ್ನಿಸುತ್ತಿರುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಸಿಯುಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕಡಿಮೆ ಅವಧಿಯಲ್ಲಿ ಹಂತ ಹಂತವಾಗಿ ಗ್ರಾಮ ಪಂಚಾಯತಿ ನೌಕರರ ಶ್ರೇಯೋಭಿವೃದ್ಧಿಗಾಗಿ ತಮ್ಮ ಸರ್ಕಾರ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರಲ್ಲದೆ ಸುಮಾರು 11,000 ಮಂದಿ ಗ್ರಾಮ ಪಂಚಾಯತಿ ನೌಕರರಿಗೆ ಸೇವಾ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮೂಲವೇತನ, ವಿಶ್ರಾಂತಿ ವೇತನ, ಆರೋಗ್ಯ ಭತ್ಯೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನೌಕರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಬೇಡಿಕೆಯನ್ನು ಪರಿಶೀಲಿಸುವ ಭರವಸೆಯನ್ನು ಸಚಿವರು ನೀಡಿದರು.

ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್‌, ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಡಗೌಡ ಹಾಗೂ ಇನ್ನಿತರ ಪದಾಧಕಾರಿಗಳು ಸಭೆಯಲ್ಲಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments