Homeಕರ್ನಾಟಕದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಎರಡು ಎಕರೆ ಜಮೀನು: ಸಚಿವ ಸತೀಶ ಜಾರಕಿಹೊಳಿ

ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಎರಡು ಎಕರೆ ಜಮೀನು: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ಸಮೀಪದ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು‌ ಮಾಡಿ ಆದೇಶಿಸಲಾಗಿರುತ್ತದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವ ಬಿ.ನಾಗೇಂದ್ರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು.

ಈ ಹಿನ್ನೆಲೆಯಲ್ಲಿ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅನುಮೋದನೆ ನೀಡಿರುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

2.03 ಎಕರೆ ಜಮೀನು ಮಂಜೂರಾತಿ ಜತೆಗೆ ಸರಕಾರವು ಈಗಾಗಲೇ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೂಡ ಘೋಷಿಸಿರುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments