Homeಕರ್ನಾಟಕವಿಜಯನಗರ ಜಿಲ್ಲೆಯ ಉಸ್ತುವಾರಿ ಬೇಡ ಎಂದು ಸಿಎಂಗೆ ಪತ್ರ ಬರೆದ ಸಚಿವ ಜಮೀರ್ ಅಹ್ಮದ್

ವಿಜಯನಗರ ಜಿಲ್ಲೆಯ ಉಸ್ತುವಾರಿ ಬೇಡ ಎಂದು ಸಿಎಂಗೆ ಪತ್ರ ಬರೆದ ಸಚಿವ ಜಮೀರ್ ಅಹ್ಮದ್

ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಯನ್ನು ನೀಡಿರುವುದು ಸರಿಯಷ್ಟೇ. ಆದರೆ, ತಮಗೆ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡದಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ವಸತಿ ಸಚಿವ ಜಮೀರ್ ಅಹ್ಮದ್ ಕೋರಿದ್ದಾರೆ.

ಈ ಕುರಿತು ಸಿಎಂ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿಭಾಯಿಸಲು ಸಮಯದ ಅಭಾವ ಇರುತ್ತದೆ. ಆದುದರಿಂದ ನನಗೆ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

ಮುಂದುವರಿದು 5.08.2026 ದಿನಾಚರಣೆಯ ಧ್ವಜಾರೋಹಣ ಹೊಣೆಗಾರಿಕೆ ನೀಡಿದ್ದು ನಾನು ಹಾಜರಾಗಲು ಸಾಧ್ಯವಾಗದ ಕಾರಣ ಅದರಿಂದ ವಿನಾಯಿತಿ ನೀಡಿ. ಸದರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ನೀಡಲಾಗಿದ್ದು ಈಗಾಗಲೇ ಈ ಸಂಬಂಧ ವರದಿ ಯನ್ನು ಸಲ್ಲಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments