Homeದೇಶಇರಾನ್‌ನಿಂದ ಕ್ಷಿಪಣಿ-ಡ್ರೋನ್ ದಾಳಿ | UAE ಕೈಗಾರಿಕಾ ಪ್ರದೇಶದಲ್ಲಿ ಭಾರೀ ಬೆಂಕಿ

ಇರಾನ್‌ನಿಂದ ಕ್ಷಿಪಣಿ-ಡ್ರೋನ್ ದಾಳಿ | UAE ಕೈಗಾರಿಕಾ ಪ್ರದೇಶದಲ್ಲಿ ಭಾರೀ ಬೆಂಕಿ

ಇರಾನ್‌ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಐವರು ಭಾರತೀಯರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಅಬುಧಾಬಿಯ ಕೈಗಾರಿಕಾ ವಲಯದಲ್ಲಿ ಘಟನೆ ನಡೆದಿದೆ. ದಾಳಿಯಲ್ಲಿ ಐದು ಮಂದಿ ಭಾರತೀಯರಿಗೆ ಗಾಯಗಳಾಗಿವೆ ಎಂದು ಸರ್ಕಾರದ ಮಾಧ್ಯಮ ಕಚೇರಿ ಮಾಹಿತಿ ನೀಡಿದೆ.

ಯುಎಇ ರಕ್ಷಣಾ ಸಚಿವಾಲಯದ ಮಾಹಿತಿ ನೀಡಿ, ಇರಾನ್‌ನಿಂದ ಹಾರಿಬಂದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ವಾಯು ರಕ್ಷಣಾ ವ್ಯವಸ್ಥೆ ತಡೆಯುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದೆ.

ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ನೆಲಕ್ಕೆ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆಂದು ತಿಳಿಸಿದ್ದಾರೆ. ಈ ಘಟನೆ ಎಮಿರೇಟ್‌ನ ಖಲೀಫಾ ಆರ್ಥಿಕ ವಲಯಗಳ ಪ್ರದೇಶದಲ್ಲಿ ನಡೆದಿದ್ದು, ಒಂದಕ್ಕಿಂತ ಹೆಚ್ಚು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments