Homeಕರ್ನಾಟಕರಾಜಭವನದ ದುರ್ಬಳಕೆ, ಚುನಾಯಿತ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಪ್ರಯತ್ನ: ಸಿದ್ದರಾಮಯ್ಯ ಕಿಡಿ

ರಾಜಭವನದ ದುರ್ಬಳಕೆ, ಚುನಾಯಿತ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಪ್ರಯತ್ನ: ಸಿದ್ದರಾಮಯ್ಯ ಕಿಡಿ

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಆರೋಪಿಸಿದರು.

ಅವರು ಇಂದು (ಆ.2) ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಶೋಕಾಸ್ ನೋಟಿಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ., ಸಂವಿಧಾನಕ್ಕೆ ವಿರುದ್ಧವಾಗಿದೆ” ಎಂದರು.

“ಕೇಂದ್ರ ಸರ್ಕಾರವು ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ನೋಟಿಸನ್ನು ಹಿಂಪಡೆಯಬೇಕೆಂದು ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರ ಮಾಡಲಾಗಿದೆ” ಎಂದು ಹೇಳಿದರು.

ಯಾವುದೇ ಅಪರಾಧ ಮಾಡಿಲ್ಲ

“ಕೆ ಜೆ ಅಬ್ರಹಾಂ ಒಬ್ಬ ಬ್ಲಾಕ್ ಮೈಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ. 26-7.2024 ರಂದು 11.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟಿಸ್‌ ಕೊಡುವಾಗ ಎಲ್ಲ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು” ಎಂದರು.

ಕಳೆದ ಸರ್ಕಾರದ ಸಚಿವರ ಮೇಲಿನ ದೂರಿನ ಬಗ್ಗೆ ಕ್ರಮ ಏಕಿಲ್ಲ?

“ಶಶಿಕಲಾ ಜೊಲ್ಲೆ , ಮುರುಗೇಶ್ ನಿರಾಣಿ , ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ಏನೂ ಇಲ್ಲದೆ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ ಅನ್ನಿಸುತ್ತೆ” ಎಂದು ಹೇಳಿದರು.

ಆರ್.ಅಶೋಕ್ ಹೆದರಿರಬೇಕು

ರಾಜ್ಯಪಾಲರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೆದರಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು. ಕಾನೂನಿನ ರೀತಿ ಅವರು ನೋಟಿಸ್‌ ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪೇ ಮಾಡಿಲ್ಲ” ಎಂದರು.

ಕುಮಾರಸ್ವಾಮಿ ಸ್ವ-ಇಚ್ಛೆ ಯಿಂದ ಪಾದಯಾತ್ರೆ ಮಾಡುತ್ತಿಲ್ಲ

“ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ಅಭ್ಯಂತರವಿಲ್ಲ. ಹೆಚ್ ಡಿ ಕುಮಾರಸ್ವಾಮಿ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದಿದ್ದಾರೆ. ಕುಮಾರಸ್ವಾಮಿ ಸ್ವ ಇಚ್ಛೆಯಿಂದ ಪಾದಯಾತ್ರೆ ಮಾಡುತ್ತಿಲ್ಲ ಎಂದಾಯಿತು” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments