Homeಕರ್ನಾಟಕಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಫೋನ್ ಮತ್ತು ಪೆನ್ ಡ್ರೈವ್ ಪತ್ತೆ!

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಫೋನ್ ಮತ್ತು ಪೆನ್ ಡ್ರೈವ್ ಪತ್ತೆ!

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಫೋನ್ ಮತ್ತು ಪೆನ್ ಡ್ರೈವ್ ಪತ್ತೆಯಾಗಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಕ್ರೈಮ್ ಬ್ರಾಂಚ್ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯ ವೇಳೆ ಪ್ರಜ್ವಲ್ ರೇವಣ್ಣ ಫೋನ್ ಬಳಸುತ್ತಿರುವುದು ಕಂಡುಬಂದಿದ್ದು, ಈ ಕುರಿತು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಭದ್ರತಾ ಲೋಪದ ಹಿನ್ನೆಲೆಯಲ್ಲಿ ಜೈಲಿನ ಸಹಾಯಕ ಸೂಪರಿಂಟೆಂಡೆಂಟನ್ನು ಅಮಾನತುಗೊಳಿಸಲಾಗಿದ್ದು, ಸೂಪರಿಂಟೆಂಡೆಂಟ್ ಅವರಿಗೆ ಶೋಕಾಸ್ ನೋಟಿಸ್‌ ಜಾರಿಗೊಳಿಸಲಾಗಿದೆ.

“ಸಿಸಿಬಿ ಅಧಿಕಾರಿಗಳು ಎಲ್ಲ ಪ್ರಭಾವಿ ಕೈದಿಗಳ ಬ್ಯಾರಕ್‌ಗಳ ಮೇಲೆ ಮಂಗಳವಾರ ದಾಳಿ ನಡೆಸಿದ್ದರು. ಈ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಒಂದು ಆಂಡ್ರಾಯ್ಡ್ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ’ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments