ಮಾಡೆಲಿಂಗ್ ಕ್ಷೇತ್ರದಲ್ಲಿ ವರ್ಣಭೇದ ನೀತಿಯ ವಿರುದ್ದ ಹೋರಾಟ ಮಾಡಿದ್ದ ಮಾಡೆಲ್ ಸ್ಯಾನ್ ರೆಚಲ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜು. 5ರಂದು ಅವರು ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದರು. ನಂತರ ಚಿಕಿತ್ಸೆಗಾಗಿ ಅವರನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಬಳಿಕ ಜವಾಹರಲಾಲ್ ಇನ್ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ ಅಂಡ್ ರಿಸರ್ಚ್ (ಜಿಪ್ಮರ್)ಗೆ ದಾಖಲಿಸಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳದಲ್ಲಿ ಅವರು ಬರೆದ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ಅದಾಗ್ಯೂ, ಆಕೆಯ ವೈವಾಹಿಕ ಜೀವನದ ಸಮಸ್ಯೆಗಳು ಆಕೆಯ ಮಾನಸಿಕ ಆರೋಗ್ಯದ ಸಮಸ್ಯೆಗಳಿಗೆ ಕಾರಣವಾಗಿರಬಹುದೇ ಎಂದು ಪರಿಶೀಲಿಸಲು ಅಧಿಕಾರಿಗಳು ತಹಶೀಲ್ದಾರ್ ಮಟ್ಟದ ತನಿಖೆ ಪ್ರಾರಂಭಿಸಿದ್ದಾರೆ.
ಸ್ಯಾನ್ ರೆಚಲ್ ಇತ್ತೀಚೆಗೆ ವಿವಾಹವಾಗಿ, ಹೈದರಾಬಾದ್‌ನಲ್ಲಿ ನೆಲೆಸಿದ್ದರು. ಫ್ಯಾಷನ್ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ವರ್ಣಭೇದ ನೀತಿಯ ವಿರುದ್ಧ ಅವರು ಧ್ವನಿ ಎತ್ತಿದ್ದರು. ರೇಚಲ್ ಇತ್ತೀಚೆಗೆ ತನ್ನ ವೃತ್ತಿಪರ ಮಹತ್ವಾಕಾಂಕ್ಷೆಗಳಿಗೆ ಹಣಕಾಸು ಒದಗಿಸಲು ತನ್ನ ಆಭರಣಗಳನ್ನು ಒತ್ತೆ ಇಟ್ಟಿದ್ದರು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.
2022ರಲ್ಲಿ ಮಿಸ್ ಪುದುಚೇರಿ ಪ್ರಶಸ್ತಿಯನ್ನು ಸ್ಯಾನ್ ರೆಚಲ್ ಗೆದ್ದಿದ್ದಾರೆ. 2023 ರಲ್ಲಿ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.
ಆತ್ಮಹತ್ಯೆ ಪರಿಹಾರವಲ್ಲ
ನಿಮಗೆ ಆತ್ಮಹತ್ಯಾ ಆಲೋಚನೆಗಳು ಬರುತ್ತಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆಯಾಗಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಅದನ್ನು ಆಲಿಸಲು ಯಾರಾದರೂ ಇದ್ದೆ ಇರುತ್ತಾರೆ. ಸ್ನೇಹ ಫೌಂಡೇಶನ್ – 04424640050 (24×7 ಲಭ್ಯವಿದೆ) ಅಥವಾ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ – 9152987821 ಗೆ ಕರೆ ಮಾಡಿ, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10 ರವರೆಗೆ ಲಭ್ಯವಿದೆ.