Homeಕರ್ನಾಟಕರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆ, ಕೆಲವು ಜೆಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆ, ಕೆಲವು ಜೆಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವ ಮಧ್ಯ ಅರೇಬಿಯನ್‌ ಸಮುದ್ರ ಮತ್ತು ಉತ್ತರ ಲಕ್ಷ ದ್ವೀಪ ಪ್ರದೇಶದ ಮೇಲೆ ಬೀಸಿದ ಚಂಡಮಾರುತದ ಪ್ರಭಾವದಿಂದ ಒಂದು ವಾರ ರಾಜ್ಯದಲ್ಲಿ ಸಾಧಾರಣ ಮಳೆ ಬರಲಿದೆ.

ಭಾನುವಾರ ಹಾಗೂ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಅಕ್ಟೋಬರ್‌ 19 ರಂದು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ಮತ್ತು ಅಕ್ಟೋಬರ್ 21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಹಾಗೂ ಒಳನಾಡಿನ ಹಲವೆಡೆ ಶನಿವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಮಳೆಯ ತೀವ್ರತೆ ಭಾನುವಾರ ಹೆಚ್ಚುವ ಸಂಭವವಿದ್ದು, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments