ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಮೂರು ವಿಧೇಯಕಗಳನ್ನ ಮಂಡನೆ ಮಾಡಲಾಯಿತು.
ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಂಜಸ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷಗಳು ಅಧಿವೇಶನ ಆರಂಭವಾಗುತ್ತಿದ್ದಂತೆ ನಿನ್ನೆಯ ಪ್ರತಿಭಟನೆ ಮುಂದುವರಿಸಿದರು. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗೆ ಇಳಿದು ಧರಣಿ ಮುಂದುವರೆಸಿದರು.
ವಿಪಕ್ಷಗಳ ಪ್ರತಿಭಟನೆ ನಡುವೆ ವಿಧಾನಸಭೆಯಲ್ಲಿ ಸರಕು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ, ಸಿನಿ ಸಾಂಸ್ಕೃತಿಕ ಕ್ಷೇಮಾಭಿವೃದ್ದಿ ವಿಧೇಯಕ ಸೇರಿ ಮೂರು ಮಸೂದೆಗಳನ್ನ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಮಂಡಿಸಿದರು. ಸಭಾಧ್ಯಕ್ಷರು ಧ್ವನಿ ಮತದ ಮೂಲದ ಅಂಗೀಕರಿಸಿದರು.