Homeಕರ್ನಾಟಕಸಚಿವ ಸ್ಥಾನ ಸಿಗದಿರುವುದಕ್ಕೆ ಹೈಕಮಾಂಡ್‌ ವಿರುದ್ಧ ಬೇಸರ ಹೊರಹಾಕಿದ ಸಂಸದ ರಮೇಶ ಜಿಗಜಿಣಗಿ

ಸಚಿವ ಸ್ಥಾನ ಸಿಗದಿರುವುದಕ್ಕೆ ಹೈಕಮಾಂಡ್‌ ವಿರುದ್ಧ ಬೇಸರ ಹೊರಹಾಕಿದ ಸಂಸದ ರಮೇಶ ಜಿಗಜಿಣಗಿ

ಬಹಳ ಜನ ದಲಿತರು ಬಿಜೆಪಿ ಸೇರಬೇಡಿ ಎಂದು ನನ್ನ ಜೊತೆ ವಾದ ಮಾಡಿದ್ದರು. ಆದರೂ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ವಿಜಯಪುರ ನಗರದಲ್ಲಿ ಸಂಸದರ‌ ಕಚೇರಿ‌ ಉದ್ಘಾಟನೆ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, “ದೆಹಲಿಯಿಂದ ವಿಜಯಪುರಕ್ಕೆ ಮರಳಿದಾಗ ಜನ ನನಗೆ ‘ಥೂ’ ಎಂದು ಬೈದಿದ್ದರು” ಎಂದರು.

ಬಿಜೆಪಿ ದಲಿತರ ವಿರೋಧಿ. ಹೀಗಾಗಿ ಈ ಪಕ್ಷ ಸೇರಬೇಡಿ ಎಂದು ಬಹಳ ಜನ ದಲಿತರು ನನಗೆ ಹೇಳಿದ್ದಾರೆ. ನನಗೋಸ್ಕರ ಅಲ್ಲದಿದ್ದರೂ ಜನರ ಒತ್ತಡವಂತೂ ಇದೆ. ಎಲ್ಲ ಮೇಲ್ವರ್ಗದ ಜಾತಿಯವರೇ ಸಚಿವರಾಗಿದ್ದಾರೆ. ದಲಿತರೇನು ಬಿಜೆಪಿಗೆ ಬೆಂಬಲ ನೀಡಿಲ್ಲವೇ” ಎಂದು ಜಿಗಜಿಣಗಿ‌ ಪ್ರಶ್ನಿಸಿದರು.

“ಬಿಜೆಪಿ ನಾಯಕರ ಒಳ ರಾಜಕೀಯದಿಂದಾಗಿ ನನಗೆ ಸಚಿವ ಸ್ಥಾನ ತಪ್ಪಿದೆ. ನಾನು ಸಚಿವನಾಗಬೇಕು ಎಂಬುದು ಉತ್ತರ ಕರ್ನಾಟಕದ ಜನರ ಮತ್ತು ನಮ್ಮ ಸಮಾಜದ ಜನರ ಬಯಕೆಯಾಗಿತ್ತು. ರಾಜ್ಯದ ನಾಯಕರು ಸಚಿವ ಸ್ಥಾನಕ್ಕೆ ನನ್ನ ಹೆಸರನ್ನು ಶಿಫಾರಸು ಮಾಡುತ್ತಾರೆ ಎಂಬ ನಂಬಿಕೆ ಇತ್ತು. ಆದರೆ,
ಯಾರೊಬ್ಬರೂ ನನ್ನ ಪರ ಮಾತನಾಡಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments