ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ.
ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, “ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಲಾಗಿದೆ. ಇದಕ್ಕೆ ಲಿಂಗಾಯತ ಧರ್ಮ ವಿರೋಧಿ ಹೇಳಿಕೆ ಮತ್ತು ಅಕ್ರಮ ಆಸ್ತಿ ಗಳಿಕೆ ಕಾರಣ” ಎಂದಿದ್ದಾರೆ.
“ಸ್ವಾಮೀಜಿ ಅವರು ದಾವಣಗೆರೆ ಹಾಗೂ ಇತರೆ ಕಡೆ ಆಸ್ತಿ ಮಾಡಿದ್ದಾರೆ. ಹಾಗೇ ಲಿಂಗಾಯತ ತತ್ವ ಬಿಟ್ಟು ಹಿಂದುತ್ವ ಪರ ಹೊರಟಿದ್ದಾರೆ. ಹೀಗಾಗಿ ಭಾನುವಾರ ಪೀಠದಲ್ಲಿ ನಡೆದ ಟ್ರಸ್ಟ್ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಹೇಳಿದರು.
“ಟ್ರಸ್ಟ್ ಸದಸ್ಯರ ಮಾತು ಕೇಳೋದಿಲ್ಲ. ಪೀಠದಲ್ಲಿ ಇರೋದಿಲ್ಲ. ಒಂದು ಪಕ್ಷದ ಪರ ಹೊರಟಿದ್ದಾರೆ. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ. ಹೀಗೆ ಅನೇಕ ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ” ಎಂದು ತಿಳಿಸಿದರು.