Homeಕರ್ನಾಟಕMSIL ಚಿಟ್ಸ್ ಹೊಸ ಸಾಫ್ಟ್ ವೆರ್ ಹಾಗೂ ಮೊಬೈಲ್ ಆಪ್ ಬಿಡುಗಡೆ

MSIL ಚಿಟ್ಸ್ ಹೊಸ ಸಾಫ್ಟ್ ವೆರ್ ಹಾಗೂ ಮೊಬೈಲ್ ಆಪ್ ಬಿಡುಗಡೆ

– ಸರ್ಕಾರದ ಗ್ಯಾರಂಟಿಗಳು ಜನರ ಉಳಿತಾಯಕ್ಕೆ ನೆರವಾಗಿದೆ: ಸಿಎಂ

– ‘ಜನರ ಉಳಿತಾಯದ ಹೂಡಿಕೆಗಳು ಸುಭದ್ರವಾಗಿರುವುದು ಗ್ಯಾರಂಟಿ’

ಜನರು ಉಳಿತಾಯದ ಹೂಡಿಕೆಗಳು ಸರ್ಕಾರದ ಎಂ ಎಸ್ ಐ ಎಲ್ ಸಂಸ್ಥೆಯಲ್ಲಿ ಸುಭದ್ರವಾಗಿರುವ ಗ್ಯಾರಂಟಿ ಇದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ಆಯೋಜಿಸಲಾಗಿದ್ದ MSIL ಚಿಟ್ಸ್ ಹೊಸ ಸಾಫ್ಟ್ ವೆರ್ ಹಾಗೂ ಮೊಬೈಲ್ ಆಪ್ ಬಿಡುಗಡೆಗೊಳಿಸಿ ಮಾತನಾಡಿದರು.

ಎಂಎಸ್ ಐ ಎಲ್ ಸರ್ಕಾರಿ ಸಂಸ್ಥೆಯು ಹಲವು ದಶಕಗಳಿಂದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. 2005 ರಿಂದ ಚಿಟ್ ಫಂಡ್ ವ್ಯವಸ್ಥೆ ಪ್ರಾರಂಭವಾಗಿದೆ. ಉಳಿತಾಯದ ಸಂಸ್ಕೃತಿ ಅತ್ಯವಶ್ಯ.ವಾಗಿದ್ದು, ಅಗತ್ಯ ಸಂದರ್ಭದಲ್ಲಿ ಉಳಿತಾಯದ ಹಣ ನೆರವಿಗೆ ಬರುತ್ತದೆ. ಜಾತಿವರ್ಗಗಳ ಬೇಧವಿಲ್ಲದೇ ಜಾರಿಯಾಗುವ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ ದಿಂದ ಉಳಿತಾಯವಾಗುವ ಹಣವನ್ನು ಜನರು ವಿಶೇಷವಾಗಿ ಮಹಿಳೆಯರು ಹೂಡಿಕೆ ಮಾಡಬೇಕು ಎಂದರು.

ಜನರ ಹೂಡಿಕೆ ಭದ್ರತೆಯ ಖಾತ್ರಿ

ಹೂಡಿಕೆ ಹಣವನ್ನು ಸುರಕ್ಷಿತವಾಗಿರುವುದು ಅತ್ಯಂತ ಅಗತ್ಯವಾಗಿದ್ದು, ಎಂಎಸ್ ಐ ಎಲ್ ನ ಚಿಟ್ ಫಂಡ್ ಈ ಭರವಸೆಯನ್ನು ನೀಡುತ್ತದೆ. ಸಾಮಾನ್ಯವಾಗಿ ನಡೆಯುವ ಚೀಟಿ ವ್ಯವಹಾರಗಳಲ್ಲಿ ಮೋಸವಾಗುವ ಸಾಧ್ಯವಿರುತ್ತದೆ. ಆದರೆ ಎಂಎಸ್ ಐ ಎಲ್, ಸರ್ಕಾರಿ ಸಂಸ್ಥೆಯಾಗಿದ್ದು, ಜನರ ಹೂಡಿಕೆಗೆ ಭದ್ರತೆಯನ್ನು ಒದಗಿಸುತ್ತದೆ. ತಮ್ಮ ಹೂಡಿಕೆಯ ಕೇವಲ ಶೇ.5 ರಷ್ಟು ಲಾಭ ಪಡೆಯುವ ಸಂಸ್ಥೆ ಜನರ ಆರ್ಥಿಕ ಭದ್ರತೆಗೆ ನೆರವಾಗಿದೆ ಎಂದರು.

ಚಿಟ್ ಫಂಡ್ ವಹಿವಾಟು 10000 ಕೋಟಿ ಗೆ ಏರಿಸುವ ಗುರಿ

ಕೇರಳ ರಾಜ್ಯದಲ್ಲಿ ಈ ಕ್ಷೇತ್ರದಲ್ಲಿ 47000 ಕೋಟಿ ವಹಿವಾಟು ನಡೆಯುತ್ತದೆ. ಕರ್ನಾಟಕದಲ್ಲಿ ಕೇವಲ 500 ಕೋಟಿ ವ್ಯವಹಾರ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಈ ಮೊತ್ತವನ್ನು 10000 ಕೋಟಿ ಯಷ್ಟು ವಹಿವಾಟು ನಡೆಸುವ ಗುರಿಯನ್ನು ಸಂಸ್ಥೇ ಹೊಂದಿದೆ. ಶಿಕ್ಷಣ, ಆರೋಗ್ಯ, ಮದುವೆ, ಮನೆ ಹೀಗೆ, ಜನರು ತಮ್ಮ ಅಗತ್ಯಗಳಿಗಾಗಿ ಹೂಡಿಕೆ ಮಾಡುವ ಉಳಿತಾಯದ ಮೊತ್ತ ಸುಭದ್ರವಾಗಿರುವ ಗ್ಯಾರಂಟಿ ಇದೆ. ಹಣ ಗಳಿಸುವುದು ಹಾಗೂ ಸುಭದ್ರವಾಗು ಹೂಡಿಕೆ ಮಾಡುವುದೂ ಮುಖ್ಯ ಎಂದರು.

ಕಿರುಸಾಲ ಪಡೆದ ಜನರ ರಕ್ಷಣೆಗಾಗಿ ಕಾಯ್ದೆ

ಎಂಎಸ್ ಐ ಎಲ್ ನ ಚಿಟ್ ಫಂಡ್ ವ್ಯವಹಾರದಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಆಧುನಿಕ ತಂತ್ರಾಂಶವನ್ನು ಇಂದು ಲೋಕಾರ್ಪಣೆಗೊಳಿಸಲಾಗಿದೆ. ಮೈಕ್ರೋ ಫೈನಾನ್ಸ್ ಗಳು ನೀಡುವ ಸಾಲದ ಸುಳಿಯಲ್ಲಿ ಅನೇಕ ಜನರು ಸಿಲುಕುತ್ತಾರೆ. ಆದ್ದರಿಂದ ಕಿರು ಸಾಲ ಮತ್ತು ಸಣ್ಣ ಸಾಲ ಅಧ್ಯಾದೇಶ 2025 ನ ರಕ್ಷಣೆ ನೀಡಲಾಗಿದೆ. ಸಾಲ ಪಡೆದ ಕಿರುಕುಳ ಅನುಭವಿಸುತ್ತಿರುವ ಜನರ ರಕ್ಷಣೆಗಾಗಿ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments