ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಕರ್ನಾಟಕ ಹೈಕೋರ್ಟ್‌ನ ವಿರುದ್ಧ ಜಾರಿ ನಿರ್ದೇಶನಾಲಯದ ಮೇಲ್ಮನವಿಯನ್ನು ಪರಿಗಣಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯವನ್ನು ರಾಜಕೀಯ ಹೋರಾಟಗಳಿಗೆ ಏಕೆ ಬಳಸಲಾಗುತ್ತಿದೆ ಎಂದು ಪ್ರಶ್ನಿಸಿ ಅರ್ಜಿಯನ್ನು ವಜಾಗೊಳಿಸಿದೆ.
ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ, ಇಡಿಯನ್ನು ಟೀಕಿಸಿದೆ. ಮತದಾರರ ಮುಂದೆ ರಾಜಕೀಯ ನಡೆಯಲಿ. ಇದರಲ್ಲಿ ನಿಮ್ಮನ್ನು ಯಾಕೆ ಬಳಸಿಕೊಳ್ಳಲಾಗುತ್ತಿದೆ. ದಯವಿಟ್ಟು ನಮ್ಮನ್ನು ಬಾಯಿ ತೆರೆಯಲು ಬಿಡಬೇಡಿ. ಇಲ್ಲದಿದ್ದರೆ, ನಾವು ಇ.ಡಿ ಬಗ್ಗೆ ಕೆಲವು ಕಠಿಣ ಟೀಕೆಗಳನ್ನು ಮಾಡಬೇಕಾಗಬಹುದು ಎಂದು ಇ.ಡಿ ಕಾರ್ಯವೈಖರಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.