Homeಕರ್ನಾಟಕಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು

ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ.

ನಕಲಿ ಸಹಿ ವಿಚಾರವಾಗಿ ಸಿಎಂ ಪತ್ನಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.

ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ದೂರುಗಳು ದಾಖಲಾಗುತ್ತಲೇ ಇವೆ. ರಾಜ್ಯಪಾಲರಿಗೆ ನಾಲ್ಕು ದೂರುಗಳು ದಾಖಲಾಗಿವೆ. ಈಗಾಗಲೇ ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಅನುಮತಿ ತಡೆ ಕೋರಿ ಹೈಕೋರ್ಟ್​ನಲ್ಲಿ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದು, ಗುರುವಾರ ವಿಚಾರಣೆ ನಡೆಯಲಿದೆ.

ಸಿಎಂ ಬಿಡುಗಡೆ ಮಾಡಿದ್ದ ಪತ್ರದಲ್ಲಿ ವೈಟ್ನರ್ ಹಿಂದಿನ ಅಕ್ಷರ ತೋರಿಸಲಾಗಿತ್ತು. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆಯೇ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಸಹಚರರ ವಿರುದ್ಧವೂ ಕ್ರಮ ವಹಿಸುವಂತೆ ಅದೇ ದೂರಿನಲ್ಲಿ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments