Homeಕರ್ನಾಟಕಮುಡಾ | 14 ಸೈಟ್ ಅಕ್ರಮ ಆರೋಪದಲ್ಲಿ ಸಿಎಂ ಪಾತ್ರವಿಲ್ಲ; ವರದಿ ಸಲ್ಲಿಕೆ

ಮುಡಾ | 14 ಸೈಟ್ ಅಕ್ರಮ ಆರೋಪದಲ್ಲಿ ಸಿಎಂ ಪಾತ್ರವಿಲ್ಲ; ವರದಿ ಸಲ್ಲಿಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದರು. ಇನ್ನು ಸಲ್ಲಿಸಿರುವ ವರದಿಯಲ್ಲಿ 14 ಮುಡಾ ಸೈಟ್ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಕುರಿತು ರಾಜ್ಯ ಸರ್ಕಾರ 2024ರ ಜುಲೈನಲ್ಲಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚಿಸಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಆರು ತಿಂಗಳೊಳಗೆ ವರದಿ ನೀಡುವಂತೆಯೂ ಸೂಚನೆ ನೀಡಿತ್ತು.

ಮುಡಾ ನಿವೇಶನ​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದು, ಪ್ರಕರಣ ಭಾರಿ ಸದ್ದು ಮಾಡಿತ್ತು. ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣವನ್ನು ಸಿದ್ದರಾಮಯ್ಯನವರ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಸ್ತ್ರ ಮಾಡಿಕೊಂಡು ತೀವ್ರ ಹೋರಾಟ ನಡೆಸಿದ್ದವು.

ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಮುಡಾ ಕೇಸ್‌ನಲ್ಲಿ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಇದರ ಬೆನ್ನಲ್ಲೇ ಈಗ ನ್ಯಾ. ದೇಸಾಯಿ ಕಮಿಟಿ ಕೂಡ ಕ್ಲೀನ್ ಚಿಟ್ ನೀಡಿದೆ. ಸಿದ್ದರಾಮಯ್ಯ ತಮ್ಮ ಅಧಿಕಾರ ಬಳಸಿರುವುದು ಕಂಡು ಬಂದಿಲ್ಲ. ತಮ್ಮ ಅಧಿಕಾರ ಬಳಸಿರುವುದಕ್ಕೆ ಸೂಕ್ತ ಪುರಾವೆ ಇಲ್ಲ ಎಂದೂ ನ್ಯಾ. ದೇಸಾಯಿ ಕಮಿಟಿ ವರದಿಯಲ್ಲಿ ಸ್ಪಷ್ಟಪಡಿಸಿದೆ. ಸಿಎಂ ಪತ್ನಿ ಪಾರ್ವತಿ ಸಲ್ಲಿಸಿದ್ದ, ‘ಇಂತಹದ್ದೇ ಜಾಗದಲ್ಲಿ ಪರ್ಯಾಯ ನಿವೇಶನ ಕೊಡಿ’ ಎಂಬ ಅರ್ಜಿ ಪ್ರಸ್ತಾಪ ಮಾಡಿಲ್ಲ. ಆದರೆ, ಈ ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments