Homeಕರ್ನಾಟಕಮುಡಾ | ಸಿಎಂ ಪತ್ನಿ ಪಾರ್ವತಿ & ಸಚಿವ ಬೈರತಿ ಸುರೇಶ್‌ಗೆ ಇ.ಡಿ ನೋಟಿಸ್

ಮುಡಾ | ಸಿಎಂ ಪತ್ನಿ ಪಾರ್ವತಿ & ಸಚಿವ ಬೈರತಿ ಸುರೇಶ್‌ಗೆ ಇ.ಡಿ ನೋಟಿಸ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ.

ಮುಡಾ ಹಗರಣದಲ್ಲಿ ಎ2 ಆರೋಪಿಯಾಗಿರುವ ಪಾರ್ವತಿ ಸಿದ್ದರಾಮಯ್ಯ ಮತ್ತು ಮುಡಾದಿಂದ ಕಡತಗಳನ್ನು ತೆಗೆದುಕೊಂಡು ಹೋಗಿರುವ ಆರೋಪದ ಮೇಲೆ ಸಚಿವ ಬೈರತಿ ಸುರೇಶ್‌ ಅವರಿಗೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್‌ನಲ್ಲಿ ತಿಳಿಸಿದೆ.

ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಅವರು ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments