Homeಕರ್ನಾಟಕಮುಡಾ ಹಗರಣ | ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ, ಕಾದು ನೋಡಿ: ವಿಜಯೇಂದ್ರ

ಮುಡಾ ಹಗರಣ | ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ, ಕಾದು ನೋಡಿ: ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣ ಸಂಬಂಧ ರಾಜೀನಾಮೆ ಕೊಡಲೇಬೇಕಾಗುತ್ತದೆ. ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿ, “ಅಧಿಕಾರಿ ಅಮಾನತಿನ ಮೂಲಕ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಸರಕಾರವು ಮೊದಲ ಬಾರಿಗೆ ಮುಡಾ ಹಗರಣ ನಡೆದುದನ್ನು ಒಪ್ಪಿಕೊಂಡಿದೆ” ಎಂದರು.

ಉಪ್ಪು ತಿಂದವರು ನೀರು ಕುಡಿಯಬೇಕು

“ಉಪ್ಪು ತಿಂದವರು ನೀರು ಕುಡಿಯಲೇ ಬೇಕಾಗುತ್ತದೆ. ವಾಲ್ಮೀಕಿ ನಿಗಮದ ಹಗರಣ ಆದಾಗ ಮತ್ತು ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಾಗ ಮುಖ್ಯಮಂತ್ರಿಗಳು ಸರಕಾರದಲ್ಲಿ ಯಾವುದೇ ಹಗರಣ ಆಗಿಲ್ಲ ಎಂದಿದ್ದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಹಗರಣ ಆಗಿದ್ದನ್ನು ಸದನದಲ್ಲಿ ಒಪ್ಪಿಕೊಂಡಿದ್ದರು” ಎಂದರು.

“ಮುಡಾದಲ್ಲಿ ಹಗರಣ ಆಗಿಲ್ಲ; ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ತದನಂತರ ಸಿಎಂ ಆರೋಪಿಸಿದ್ದರು. ಈಗ ಪ್ರಕರಣ ಕೋರ್ಟಿನಲ್ಲಿದ್ದು, ಮುಡಾದ ಹಿಂದಿನ ಕಮೀಷನರ್ ಅನ್ನು ಅಮಾನತು ಮಾಡಿದ್ದಾರೆ” ಎಂದು ವಿಜಯೇಂದ್ರ ಹೇಳಿದರು.

ಮಹಾನ್‌ ನಾಯಕ ಎಲ್ಲಿ?

“ಕಾಂಗ್ರೆಸ್‌ನ ಕೆಲವು ಮುಖಂಡರು ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಅವರ ಮಹಾನ್‌ ನಾಯಕ ಡಿ ಕೆ ಶಿವಕುಮಾರ್ ಎಲ್ಲಿದ್ದರು” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

“ಯಾಕೆ ಡಿ ಕೆ ಶಿವಕುಮಾರ್ ಇರಲಿಲ್ಲ? ಯಾಕೆ ಮುಖ್ಯಮಂತ್ರಿಗಳು ಬರಲಿಲ್ಲ? ಯಾಕೆ ನಿಮ್ಮ ಸರಕಾರದ ಇತರ ಹಿರಿಯ ಸಚಿವರು ಬರಲಿಲ್ಲ? ಈ ವಿಷಯಕ್ಕೆ ಪ್ರಿಯಾಂಕ್ ಖರ್ಗೆ ಉತ್ತರಿಸಲಿ” ಎಂದು ಆಗ್ರಹಿಸಿದರು.

“ನಮ್ಮ ಪಕ್ಷದ ಮುಖಂಡ ಛಲವಾದಿ ನಾರಾಯಣಸ್ವಾಮಿಯವರು ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಹಗರಣಗಳಲ್ಲಿ ಮುಳುಗಿದ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರಕಾರವು ತನ್ನನ್ನು ತಾನು ಕಾಪಾಡಲು ಮತ್ತು ಭ್ರಷ್ಟಾಚಾರದಿಂದ ನುಣುಚಿಕೊಳ್ಳಲು ಬಿಜೆಪಿ ಮೇಲೆ ಕೆಸರು ಎರಚುವ ಕೆಲಸ ಮಾಡುತ್ತಿದೆ” ಎಂದು ಟೀಕಿಸಿದರು.

“ನಾನು ರಾಷ್ಟ್ರೀಯ ಅಧ್ಯಕ್ಷರು, ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ರಾಜ್ಯದ ಚನ್ನಪಟ್ಟಣ ಮತ್ತಿತರ ಕ್ಷೇತ್ರಗಳ ಉಪ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇನೆ. ಯೋಗೇಶ್ವರ್ ಅವರು ಚನ್ನಪಟ್ಟಣ ಅಭ್ಯರ್ಥಿ ಆಗುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments