Homeಕರ್ನಾಟಕಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್‌) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದಾರೆ. ಇದು, ಸಿದ್ದರಾಮಯ್ಯ ಅವರ ರಾಜಕೀಯ ಬದುಕಿನಲ್ಲಿ ದೊಡ್ಡ ಸವಾಲು ಮತ್ತು ಸಂಕಷ್ಟವನ್ನು ತಂದೊಡ್ಡಿದೆ ಎಂದು ಹೇಳಲಾಗುತ್ತಿದೆ.

ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು.

ದೂರು ನೀಡಿದ್ದ ದಿನವೇ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ಜಾರಿ ಮಾಡಿದ್ದರು. ಇದೀಗ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ.

ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, ಮಡಿಕೇರಿಯ ಟಿಜೆ ಅಬ್ರಹಾಂ ಹಾಗೂ ಪ್ರದೀಪ್‌ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ.

ದೂರುದಾರರಾದ ವಕೀಲ ಟಿ.ಜೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ಅವರನ್ನು ರಾಜಭವನಕ್ಕೆ ಬರುವಂತೆ ಆಹ್ವಾನಿಸಲಾಗಿದೆ. ಈಗಾಗಲೇ ಪ್ರದೀಪ್ ರಾಜಭವನಕ್ಕೆ ಆಗಮಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪತ್ರ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments