Homeಕರ್ನಾಟಕಮುಡಾ ಹಗರಣ | ತನಿಖೆಗೆ ನ್ಯಾ. ಪಿ ಎನ್‌ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ...

ಮುಡಾ ಹಗರಣ | ತನಿಖೆಗೆ ನ್ಯಾ. ಪಿ ಎನ್‌ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ ಎನ್‌ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಆದೇಶ ಪ್ರತಿಯನ್ನು ಭಾನುವಾರ ರಾತ್ರಿ ಎಕ್ಸ್‌ ತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಮುಡಾ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಆರು ತಿಂಗಳ ಒಳಗೆ ವರದಿ ಸಲ್ಲಿಸಬೇಕು’ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಆಯೋಗವು ವಿಚಾರಣೆಗೆ ಬಯಸುವ ಎಲ್ಲ ಕಡತಗಳು ಮತ್ತು ದಾಖಲಾತಿಗಳನ್ನು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒದಗಿಸಬೇಕು. ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಅಕ್ರಮಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು, ತಾಂತ್ರಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೀಡಲು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸಬೇಕು ಎಂದು ಸೂಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments