ಮುಖ್ಯಮಂತ್ರಿಗಳ ಬಟ್ಟೆ ಪರಿಶುದ್ಧವಾಗಿದ್ದರೆ ಸಾಕಾ? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮೋಸ ಮಾಡಿರುವವರು ಸಿದ್ದರಾಮಯ್ಯಗೆ ಹತ್ತಿರವಾಗಿರುವವರು. ಅದಕ್ಕೆ ಸಿಎಂ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಆಗ್ರಹಿಸಿದರು.
ಬೆಂಗಳೂರಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, “ಭೂಮಿ ವಶಪಡಿಸಿಕೊಳ್ಳಬೆಕಾದರೆ 50:50 ನಿವೇಶನ ಕೊಡಬೇಕಾಗುತ್ತದೆ. ಸರ್ಕಾರಕ್ಕೆ ಮೋಸ ಮಾಡಬೇಕೆಂದೇ ವ್ಯವಸ್ಥಿತವಾಗಿ ಮಾಡಿದ್ದಾರೆ” ಎಂದು ಆರೋಪಿಸಿದರು.
ಭ್ರಷ್ಟಾಚಾರ ಯಾರ ಅವಧಿಯಲ್ಲಿ ಆಗಿದ್ದರೂ ಕ್ರಮ ಕೈಗೊಳ್ಳಿ. ಬಿಜೆಪಿ ಕಾಲದಲ್ಲಿ ಅಕ್ರಮ ಆಗಿದ್ದರೂ ಕ್ರಮ ತೆಗೆದುಕೊಳ್ಳಿ. ಸಿಎಂ ತವರು ಜಿಲ್ಲೆಯಲ್ಲಿಯೇ ಸಾವಿರಾರು ಕೋಟಿ ಅಕ್ರಮ ಆಗಿದೆ. ಸಿಎಂ ಸಿದ್ದರಾಮಯ್ಯನವರು ತಮ್ಮ ಪರಿಶುದ್ಧತೆಯನ್ನು ಸಾಬೀತುಪಡಿಸಲು ರಾಜೀನಾಮೆ ಒಂದೇ ದಾರಿ. ದಾಖಲೆ ಇಟ್ಟು ಭ್ರಷ್ಟಾಚಾರ ಜನರ ಮುಂದೆ ಬಯಲಿಗೆಳೆಯುತ್ತೇವೆ” ಎಂದರು.