Homeದೇಶರಾಷ್ಟ್ರೀಯ ತನಿಖಾ ದಳದಿಂದ ಹಲವು ಕಡೆ ದಾಳಿ; ಐವರ ಬಂಧನ

ರಾಷ್ಟ್ರೀಯ ತನಿಖಾ ದಳದಿಂದ ಹಲವು ಕಡೆ ದಾಳಿ; ಐವರ ಬಂಧನ

ಬೆಂಗಳೂರು ನರವನ್ನು ಬೆಚ್ಚಿ ಬೀಳಿಸಿದ್ದ ವೈಟ್‌ಫೀಲ್ಡ್‌‌ ನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟ ಪ್ರಕರಣವನ್ನು ಕೈಗೆತ್ತಿಕೊಂಡ ಬೆನ್ನಲ್ಲೇ ಮಹತ್ವದ ಕಾರ್ಯಾಚರಣೆ ಕೈಗೊಂಡ ರಾಷ್ಟ್ರೀಯ ತನಿಖಾ ದಳ (ಎನ್‌ ಐಎ)ದ ಅಧಿಕಾರಿಗಳು ಚೆನ್ನೈನ ಹಲವು ಕಡೆ ದಾಳಿ ನಡೆಸಿ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚೆನ್ನೈನ ಸಿದ್ದಾಯಳ್ ಪೇಟೆ ಮತ್ತು ಬಿಡಾರಿಯಾರ್ ಟೆಂಪಲ್ ಬಳಿ ಎನ್‌ಐಎ ಅಧಿಕಾರಿಗಳು ಕೆಲವು ಮನೆಗಳಿಗೆ ದಾಳಿ ಮಾಡಿ ಐವರನ್ನು ಬಂಧಿಸಿ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ನಿನ್ನೆಯಷ್ಟೇ ವಹಿಸಿಕೊಂಡು ಕಾರ್ಯಾಪ್ರವೃತ್ತರಾದ ಎನ್‌ಐಎ ಅಧಿಕಾರಿಗಳು, ಚೆನ್ನೈನಲ್ಲಿರುವ ತನ್ನ ಪೇಯ್ಡ್ ಇನ್ಪಾರ್ಮರ್ ಗಳನ್ನು ಅಲರ್ಟ್ ಮಾಡಿದ್ದರು. ಅವರು ನೀಡಿದ ಮಾಹಿತಿಯ ಮೇರೆಗೆ ಚೆನ್ನೈಯಲ್ಲಿ ಐವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ನಝೀರ್‌ ಜತೆ ಸಂಪರ್ಕ

ಚೆನ್ನೈನಲ್ಲಿ ವಶಕ್ಕೆ ಪಡೆದವರಲ್ಲಿ ನಾಲ್ವರು ಆರ್.ಟಿ ನಗರದ ಕುಖ್ಯಾತ ಭಯೋತ್ಪಾದಕ ನಝೀರ್‌ ಎಂಬಾತನ ಜತೆ ಸಂಪರ್ಕ ಹೊಂದಿದವರುವುದು ತನಿಖೆಯಲ್ಲಿ ಪತ್ತೆಯಾಗಿದ್ದು,ಈ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕೀಲಕಾರೈ ಏರಿಯಾ ಬಳಿ ಇರುವ ಸಂಶುದ್ದೀನ್‌ ಎಂಬಾತನ ಮನೆ ಮೇಲೆ ದಾಳಿ ಮಾಡಲಾಗಿದ್ದು,ಪ್ರಸಕ್ತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಜೀರ್‌ ಒಬ್ಬ ಕುಖ್ಯಾತ ಭಯೋತ್ಪಾದಕನಾಗಿದ್ದು, ಜೈಲಿನಲ್ಲಿ ಇರುತ್ತಲೇ ತನ್ನ ಷಡ್ಯಂತ್ರಗಳನ್ನು ರೂಪಿಸುತ್ತಾನೆ.

ಯುವಕರ ಬ್ರೇನ್‌ ವಾಷ್‌

ಕ್ರಿಮಿನಲ್‌ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರುವ ಮುಸ್ಲಿಂ ಯುವಕರನ್ನು ತನ್ನೆಡೆಗೆ ಸೆಳೆದುಕೊಂಡು ಅವರ ಬ್ರೇನ್‌ ವಾಷ್‌ ಮಾಡಿ ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಉಗ್ರ ಕೃತ್ಯಗಳಲ್ಲಿ ಭಾಗಿಯಾಗುವಂತೆ ಮಾಡುವುದು ಈತನು ರೂಪಿಸಿರುವ ಸಂಚು ಆಗಿದೆ.

ವರ್ಷದ ಹಿಂದೆ ಆರ್ ಟಿ ನಗರದ ಸುಲ್ತಾನ್ ಪಾಳ್ಯದ ಮನೆಯೊಂದರಲ್ಲಿ ಲೈವ್ ಗ್ರನೇಡ್ , ಪಿಸ್ತೂಲ್ ಸೇರಿ ಹಲವಾರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು,ಈ ಪ್ರಕರಣವನ್ನು ಮುಂದಿನ ತನಿಖೆಗಾಗಿ ಎನ್ಐಎಗೆ ವರ್ಗಾವಣೆ ಮಾಡಲಾಗಿತ್ತು.

ಪಿಸ್ತೂಲ್,ಗುಂಡು ಜಪ್ತಿ

ಅಂದು ಸೈಯದ್ ಸೊಹೇಲ್‌, ಜಾಹಿದ್, ಮುದಾಸಿರ್, ಉಮರ್, ಫೈಜಲ್ ಎಂಬುವರನ್ನು ಗ್ರನೇಡ್, ಪಿಸ್ತೂಲ್, ಜೀವಂತ ಗುಂಡುಗಳ ಜೊತೆಗೆ ಬಂಧನ ಮಾಡಲಾಗಿತ್ತು. ಬಳಿಕ ಏಳು ಪಿಸ್ತೂಲ್, ನಲವತ್ತೈದು ಜೀವಂತ ಗುಂಡುಗಳು, ಹದಿನೈದು ಮೊಬೈಲ್, 20ಕ್ಕೂ ಹೆಚ್ಚು ಸಿಮ್ ಕಾರ್ಡ್, ಒಂದು ಡ್ಯಾಗರ್ ವಶಕ್ಕೆ ಪಡೆಯಲಾಗಿತ್ತು.

ಕಳೆದ ಫೆ.1ರ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದಲ್ಲೂ ನಜೀರ್‌ನಿಂದ ಪ್ರೇರಿತರಾದ ದುಷ್ಟರೇ ಭಾಗಿಯಾಗಿದ್ದಾರೆ ಎಂಬ ಸಣ್ಣ ಸಂಶಯವಿದೆ. ಅದರ ಭಾಗವಾಗಿಯೇ ಈಗ ನಜೀರ್‌ ಜತೆ ಸಂಬಂಧ ಹೊಂದಿರುವ ವ್ಯಕ್ತಿಗಳ ವಿಚಾರಣೆ ನಡೆಯಲಿದೆ. ಪರಪ್ಪನ ಅಗ್ರಹಾರದಲ್ಲಿರುವ ನಜೀರ್‌ನನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments