Homeಕರ್ನಾಟಕಮುನಿರತ್ನ ಪ್ರಕರಣ | ಸರ್ಕಾರದಿಂದ ದ್ವೇಷದ ರಾಜಕಾರಣ: ಸಿ ಟಿ ರವಿ ಟೀಕೆ

ಮುನಿರತ್ನ ಪ್ರಕರಣ | ಸರ್ಕಾರದಿಂದ ದ್ವೇಷದ ರಾಜಕಾರಣ: ಸಿ ಟಿ ರವಿ ಟೀಕೆ

ರಾಜ್ಯದ ಕಾಂಗ್ರೆಸ್ ಸರಕಾರ ಪೂರ್ವಗ್ರಹಪೀಡಿತವಾಗಿ ವರ್ತಿಸುತ್ತಿದೆ. ಚಲುವರಾಯಸ್ವಾಮಿ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ಕೂಡ ದಾಖಲಾಗುವುದಿಲ್ಲ. ಮುನಿರತ್ನ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ದಾಖಲಾಗುತ್ತದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಟೀಕಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಮುಂದೆ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ರಾಜ್ಯ ಸರಕಾರ ತೋರಿಸಬೇಕಿತ್ತು. ಚನ್ನಾರೆಡ್ಡಿ ಮೇಲೆ ಅಟ್ರಾಸಿಟಿ ಕೇಸ್ ದಾಖಲಾದರೆ ಅವರನ್ನು ಬಂಧಿಸುವುದಿಲ್ಲ. ಆದರೆ, ಮುನಿರತ್ನ ಮೇಲೆ ಅಟ್ರಾಸಿಟಿ ಕೇಸ್ ಆದರೆ ಅರೆಸ್ಟ್ ಮಾಡುತ್ತಾರೆ. ಈ ಸರಕಾರ ದ್ವೇಷದ ರಾಜಕಾರಣ ಮಾಡುವುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು” ಎಂದು ಪ್ರಶ್ನಿಸಿದರು.

“ತನಿಖೆ ಮಾಡಿ ತಪ್ಪಾಗಿದ್ದರೆ ಶಿಕ್ಷೆ ಆಗಲಿದೆ. ಆದರೆ, ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಮತ್ತೊಂದು ನ್ಯಾಯ ಮಾಡಲು ಇವರಿಗೆ ಅಧಿಕಾರ ಕೊಟ್ಟಿಲ್ಲ. ಸಿದ್ದರಾಮಯ್ಯನವರಿಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ತನಿಖೆ ಎದುರಿಸಲು ಹಿಂಜರಿಯುತ್ತಿರಲಿಲ್ಲ” ಎಂದರು.

“ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟರೆ ತನಿಖೆ ಎದುರಿಸಲು ಮುಖ್ಯಮಂತ್ರಿಗಳು ಭಯ ಪಡುತ್ತಾರೆ. ರಾಜ್ಯಪಾಲರ ವಿರುದ್ಧ ಚಳವಳಿ ಮಾಡುವ ಮಾತನಾಡಿದ್ದಾರೆ. ಸಿದ್ದರಾಮಯ್ಯನವರು ತಮ್ಮದು ಕಳಂಕರಹಿತ ಆಡಳಿತ ಎಂದು ತೀರ್ಪು ಕೊಟ್ಟುಕೊಳ್ಳುತ್ತಾರೆ. ಅವರೇ ಜಡ್ಜ್, ಅವರೇ ಲಾಯರ್” ಎಂದು ಲೇವಡಿ ಮಾಡಿದರು.

“ಮುಖ್ಯಮಂತ್ರಿಯವರೇ, ನಿಮ್ಮದು ಕಳಂಕರಹಿತ ಆಡಳಿತ ಅಲ್ಲ ಎನ್ನಲು ನಮ್ಮ ಹತ್ತಿರ ಸಾಕಷ್ಟು ಸಾಕ್ಷಿಗಳಿವೆ” ಎಂದು ಎಚ್ಚರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments