ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಹೇಳದಿರಲು ಡೀಲ್ ಮಾಡಲಾಗಿದ್ದ 30 ಲಕ್ಷ ರೂ. ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ದರ್ಶನ್ ಆಪ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಹಣವನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ. ದರ್ಶನ್ ಕೊಟ್ಟಿದ್ದ 30 ಲಕ್ಷ ಹಣವನ್ನು ಆಪ್ತನೊಬ್ಬನ ಮನೆಯಲ್ಲಿ ಇಡಲಾಗಿದ್ದನ್ನು ವಿಚಾರಣೆ ವೇಳೆ ಆರೋಪಿಗಳು ಹಣದ ಬಗ್ಗೆ ಬಾಯ್ಬಿಟ್ಟಿದ್ದು,ತಕ್ಷಣವೇ ಕಾರ್ಯ ಕೈಗೊಂಡು. ಹಣವನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಒಪ್ಪಿಕೊಳ್ಳಲು, ಮೃತದೇಹ ಸಾಗಿಸಲು ಮತ್ತು ನಟ ದರ್ಶನ್ ಹೆಸರನ್ನು ಬಾಯಿಬಿಡದಿರಲು ಬಂಧಿತರ ಪೈಕಿ ಐವರಿಗೆ 30 ಲಕ್ಷಕ್ಕೆ ಸುಪಾರಿ ನೀಡಲಾಗಿತ್ತು.
ಮೃತದೇಹ ಯಾರಿಗೂ ಸಿಗದಂತೆ ಸಾಗಿಸಲು ಮೂವರು ಆರೋಪಿಗಳಿಗೆ ಮುಂಗಡವಾಗಿ ಒಟ್ಟು 5 ಲಕ್ಷ ಸಂದಾಯ ಮಾಡಲಾಗಿತ್ತು. ಉಳಿದ ಇಬ್ಬರು ಆರೋಪಿಗಳು ಜೈಲಿಗೆ ಹೋದ ಮೇಲೆ ಅವರ ಮನೆಯವರಿಗೆ ಹಣ ತಲುಪಿಸುವುದಾಗಿ ಹೇಳಲಾಗಿತ್ತು. ಈ ವಿಚಾರವನ್ನು ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.
ಕಳೆದ ಜೂ.9 ರಂದು ಸುಮನಹಳ್ಳಿ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್ ಸಮೀಪದ ಮೋರಿ ಬಳಿ ಸಿಕ್ಕಿದ ರೇಣುಕಾಸ್ವಾಮಿ ಮೃತದೇಹ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಹಲವು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.
ಮಾಜಿ ಅಪ್ತ ಸಹಾಯಕ ಮಲ್ಲಿಕಾರ್ಜುನ್ ನಾಪತ್ತೆ?
ನಟ ದರ್ಶನ್ ಅವರ ಮಾಜಿ ಅಪ್ತ ಸಹಾಯಕ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ನಾಪತ್ತೆಯಾಗಿ 7 ವರ್ಷ ಕಳೆದರೂ ಪತ್ತೆಯಾದ ಪ್ರಕರಣ ಮುನ್ನೆಲೆಗೆ ಬಂದಿದೆ. ಮಲ್ಲಿ ಎಲ್ಲಿದ್ದಾನೆ? ಬದುಕಿದ್ದಾನೆಯೇ? ಅಥವಾ ರೇಣುಕಾ ಸ್ವಾಮಿ ರೀತಿಯ ಆತನದ್ದೂ ಕೊಲೆ ಆಗಿದೆಯೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.
ನಟ ಅರ್ಜುನ್ ಸರ್ಜಾ ಅವರು ʻಪ್ರೇಮ ಬರಹ ಚಿತ್ರದ ವಿತರಣೆ ಹಣದ ವಿಚಾರವಾಗಿ ಮಲ್ಲಿಕಾರ್ಜುನ್ ವಿರುದ್ಧ 1 ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಆದರೆ, ಮಲ್ಲಿ ಕಳೆದ 7 ವರ್ಷಗಳಿಂದ ನಾಪತ್ತೆಯಾಗಿದ್ದಾರೆ.
ರೇಣುಕಾ ಸ್ವಾಮಿ ಪ್ರಕರಣ ಹೊರಬಂದ ಬಳಿಕ ಮಲ್ಲಿ ಕುರಿತು ಸಹ ಪ್ರಶ್ನೆಗಳು ಎದ್ದಿವೆ. ಮಲ್ಲಿ ಎಲ್ಲಿದ್ದಾನೆ? ಬದುಕಿದ್ದಾನೆಯೇ? ಅಥವಾ ರೇಣುಕಾ ಸ್ವಾಮಿ ರೀತಿಯ ಆತನದ್ದೂ ಕೊಲೆ ಆಗಿವೆಯೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ. 2018ರ ಬಳಿಕ ಮಲ್ಲಿ ಅಚಾನಕ್ಕಾಗಿ ಕಾಣೆಯಾದರು. ಅಂದಿನಿಂದ ಈ ವರೆಗೆ ಮಲ್ಲಿ ಎಲ್ಲಿದ್ದಾರೆಂಬುದು ಯಾರಿಗೂ ಗೊತ್ತಿಲ್ಲ.