ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಮತ್ತು ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳನ್ನು ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಶನಿವಾರ (ಜೂನ್ 15) ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಿ ಪೊಲೀಸ್ ಕಸ್ಟಡಿಯ ವಿಸ್ತರಣೆಗೆ ಮನವಿ ಮಾಡಲಾಯ್ತು. ಅಂತೆಯೇ ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ ಪೊಲೀಸ್ ಕಸ್ಟಡಿಯನ್ನು ಐದು ದಿನಗಳ ಕಾಲ ಮುಂದುವರೆಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಹಾಗೂ ಇತರೆ ಆರೋಪಿಗಳನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ಅದೇ ದಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು.
ಇದೀಗ ದರ್ಶನ್ ಹಾಗೂ ಆರೋಪಿಗಳು ಐದು ದಿನವನ್ನು ಕಸ್ಟಡಿಯಲ್ಲಿ ಕಳೆದಿದ್ದು, ನಾಳೆ ಭಾನುವಾರ ಆಗಿರುವ ಕಾರಣ ಒಂದು ದಿನ ಮುಂಚಿತವಾಗಿ ಅಂದರೆ ಜೂನ್ 15 ರಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿ, ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯನ್ನು ಮುಂದುವರೆಸಲಾಗಿದೆ.