Homeಕರ್ನಾಟಕನಾಗಮಂಗಲ ಗಲಭೆ | ಕರ್ನಾಟಕದಲ್ಲೂ ಬೇಕು ಬುಲ್ಡೋಜರ್ ಕಾರ್ಯಾಚರಣೆ: ಆರ್‌ ಅಶೋಕ್‌

ನಾಗಮಂಗಲ ಗಲಭೆ | ಕರ್ನಾಟಕದಲ್ಲೂ ಬೇಕು ಬುಲ್ಡೋಜರ್ ಕಾರ್ಯಾಚರಣೆ: ಆರ್‌ ಅಶೋಕ್‌

ಮುಸ್ಲಿಂ ಮತಾಂಧರ ಮನೆಗಳ ಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ತಕ್ಕ ಪಾಠ ಕಲಿಸಲು ಸಾಧ್ಯ. ಆಗ ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಬಹುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಗಮಂಗಲ ಗಲಭೆ ವಿಚಾರವಾಗಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟುಗಳು, ಸರಕು-ಸರಂಜಾಮುಗಳು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂ. ಹೆಚ್ಚು ಮೊತ್ತದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ” ಎಂದಿದ್ದಾರೆ.

“ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂ ಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನ ಕೂಡಲೇ ಪತ್ತೆ ಹಚ್ಚಬೇಕು. ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಇಂತಹ ಪೂರ್ವನಿಯೋಜಿತ ಕೋಮುಗಲಭೆಗಳನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು? ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ” ಎಂದು ಪ್ರಶ್ನಿಸಿದ್ದಾರೆ.

“ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಎಂಬುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ” ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments