Homeಕರ್ನಾಟಕನಗರತ್‌ ಪೇಟೆ ಗಲಾಟೆ | ಶೋಭಾ ಕರಂದ್ಲಾಜೆ ಸೇರಿ ಹಲವರು ಪೊಲೀಸರ ವಶಕ್ಕೆ

ನಗರತ್‌ ಪೇಟೆ ಗಲಾಟೆ | ಶೋಭಾ ಕರಂದ್ಲಾಜೆ ಸೇರಿ ಹಲವರು ಪೊಲೀಸರ ವಶಕ್ಕೆ

ಬೆಂಗಳೂರಿನ ನಗರತ್‌ ಪೇಟೆಯಲ್ಲಿ ನಡೆದಿದ್ದ ಹಿಂದು ಮುಸ್ಲಿಂ ಯುವಕರ ಗಲಾಟೆ ಪ್ರಕರಣದಲ್ಲಿ ಖಂಡಿಸಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಗಲಾಟೆಯಲ್ಲಿ ಹಲ್ಲೆಗೆ ಒಳಗಾದ ಮುಖೇಶ್ ಎಂಬುವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು, ಕರೆದೊಯ್ಯಲು ಮುಂದಾದ ವೇಳೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಆಗ ಮುಖೇಶ್ ಅವರನ್ನು ಕರೆದೊಯ್ಯಲು ಮುಂದಾದ ಪೊಲೀಸರ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ‘

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಥಳಕ್ಕೆ ಬಂದು ಪ್ರತಿಭಟನಕಾರರಿಗೆ ಬೆಂಬಲ ಸೂಚಿಸಿದರು. ಅಂಗಡಿಗಳನ್ನು ಬಂದ್ ಮಾಡಿ ರ‍್ಯಾಲಿ ನಡೆಸಲಾಗುತ್ತಿತ್ತು. “ಸರ್ಕಾರದ ವೈಫಲ್ಯದಿಂದ ಈ ಘಟನೆ ನಡೆದಿದೆ. ಗೃಹ‌ ಸಚಿವರು ರಾಜೀನಾಮೆ ನೀಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶೋಭಾ ಕರಂದ್ಲಾಜೆ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಶಾಸಕ ಸುರೇಶ್ ಕುಮಾರ್ ಅವರು ಪೊಲೀಸ್ ಜೀಪು ತಡೆಯಲು ಮುಂದಾದ ವೇಳೆಯೂ ವಾಗ್ವಾದ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಬಂದೋಬಸ್ತ್ ಕಲ್ಪಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments