Homeಕರ್ನಾಟಕನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ, ಮತ್ತೆ ಜೂ.8ಕ್ಕೆ ಪ್ರಮಾಣ ವಚನ ಸಾಧ್ಯತೆ

ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ, ಮತ್ತೆ ಜೂ.8ಕ್ಕೆ ಪ್ರಮಾಣ ವಚನ ಸಾಧ್ಯತೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನಕ್ಕೆ ಬುಧವಾರ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರಪತಿ ಕಚೇರಿ, “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಸಚಿವ ಸಂಪುಟದ ಜೊತೆಗೆ ಆಗಮಿಸಿ, ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಮನವಿ ಮಾಡಿದ್ದಾರೆ” ಎಂದು ತಿಳಿಸಿದೆ.

ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್‌ 8 ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಎನ್‌ಡಿಎ ಒಕ್ಕೂಟ 292 ಕ್ಷೇತ್ರಗಳಲ್ಲಿ ಜಯಗಳಿಸಿ ಬಹುಮತಗಳಿಸಿದೆ. ಒಂದು ವೇಳೆ ಎನ್‌ಡಿಎ ಸರ್ಕಾರ ರಚಿಸಿದರೆ ಮಾಜಿ ಪ್ರಧಾನಿ ಜವಹರ್‌ಲಾಲ್‌ ನೆಹರು ನಂತರ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುವ ಎರಡನೇ ನಾಯಕರಾಗಲಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟದ ಪಕ್ಷಗಳಾದ ಬಿಜೆಪಿ 240, ಟಿಡಿಪಿ 16, ಜೆಡಿಯು 12, ಶಿಂಧೆ ಶಿವಸೇನೆ 7 ಸ್ಥಾನ ಸೇರಿದಂತೆ ಒಟ್ಟು 292 ಕ್ಷೇತ್ರಗಳಲ್ಲಿ ಜಯ ಸಾಧಿಸಿವೆ.

ಇಂಡಿಯಾ ಒಕ್ಕೂಟದ ಪಕ್ಷಗಳಲ್ಲಿ ಕಾಂಗ್ರೆಸ್ 99, ಎಸ್‌ಪಿ 37, ಟಿಎಂಸಿ 29, ಡಿಎಂಕೆ 22 ಸ್ಥಾನಗಳು ಸೇರಿ 234 ಸ್ಥಾನಗಳಲ್ಲಿ ಜಯಗಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments