Homeಕರ್ನಾಟಕಕರಾವಳಿಯಲ್ಲಿ ಗುಂಡಿನ ಸದ್ದು: ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ಕರಾವಳಿಯಲ್ಲಿ ಗುಂಡಿನ ಸದ್ದು: ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಲಾಗಿದೆ.

ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ. 

ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು.

ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments