Homeಕರ್ನಾಟಕನಕ್ಸಲ್ ವಿಕ್ರಂ‌ ಗೌಡ ಬಳಿ ಆಟೋಮ್ಯಾಟಿಕ್ ಮಷಿನ್ ಗನ್ ಇತ್ತು: ಸಚಿವ ಪರಮೇಶ್ವರ್

ನಕ್ಸಲ್ ವಿಕ್ರಂ‌ ಗೌಡ ಬಳಿ ಆಟೋಮ್ಯಾಟಿಕ್ ಮಷಿನ್ ಗನ್ ಇತ್ತು: ಸಚಿವ ಪರಮೇಶ್ವರ್

ನಕ್ಸಲ್ ವಿಕ್ರಂ‌ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಕ್ರಂ ಗೌಡ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ. ಆಟೋಮ್ಯಾಟಿಕ್ ಮಷಿನ್ ಗನ್ ಇಟ್ಟುಕೊಂಡಿದ್ದ. ಈ ಹಿಂದೆ ಶರಣಾಗಾತಿಗಾಗಿ ಪ್ರಯತ್ನಗಳು ನಡೆದಿದ್ದವು. ಅವರ ಸಂಬಂಧಿಕರು ಸಹ ಶರಣಾಗುವಂತೆ ಹೇಳಿದ್ದರು, ವಿಕ್ರಂ ಗೌಡ ಒಪ್ಪಿರಲಿಲ್ಲ” ಎಂದರು.

“ಕಾರ್ಕಳದಲ್ಲಿ ಎಎನ್‌ಎಫ್ ಹೆಡ್‌ಕ್ವಾಟರ್ಸ್ ಇದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಟ್ಟುಕೊಂಡು ಬರಲಾಗಿದೆ. ಕಳೆದ ವಾರ ನಕ್ಸಲ್ ಲತಾ ಎಂಬುವರು ಗುರುತಿಸಲಾಗಿತ್ತು. ಕೂಬಿಂಗ್ ನಡೆಸಲಾಗಿತ್ತು. ಅವರನ್ನ ಹಾಗೇ ಬಿಟ್ಟುಕೊಂಡು, ಏನು ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ” ಎಂದು ಹೇಳಿದರು.

ಎನ್‌ಕೌಂಟರ್ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ವ್ಯತ್ಯಾಸವಿಲ್ಲ ಎಂಬ ಕೆಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ನಕ್ಸಲ್ ವಿಚಾರದಲ್ಲಿ ಪಕ್ಷದ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆ ಮುಖ್ಯವಾಗುತ್ತದೆ” ಎಂದರು‌.

ಹುಟ್ಟೂರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ

ಪೀತಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಹುಟ್ಟೂರಾದ ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ಬುಧವಾರ ನೆರವೇರಿತು. ಕೂಡ್ಲುವಿನಲ್ಲಿ ವಿಕ್ರಂಗೆ ಸೇರಿದ್ದ ಜಾಗದಲ್ಲಿ ಅಂತ್ಯಸಂಸ್ಕಾರ ನಡೆಯಿತು. ಸಮೀಪದ ಬಂಧುಗಳು, ಪೊಲೀಸರು, ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

ಹೆಬ್ರಿ ತಾಲ್ಲೂಕಿನ ಕಬ್ಬಿನಾಲೆಯ ಪೀತಬೈಲ್‌ನಲ್ಲಿ ಸೋಮವಾರ ರಾತ್ರಿ ನಕ್ಸಲರು ಮತ್ತು ನಕ್ಸಲ್ ನಿಗ್ರಹ ಪಡೆಯ (ಎಎನ್‌ಎಫ್) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಅಲಿಯಾಸ್ ಶ್ರೀಕಾಂತ್ (46) ಹತ್ಯೆಯಾಗಿದ್ದ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments