Homeಕರ್ನಾಟಕಎನ್ ಡಿ ಆರ್ ಎಫ್ ಅನುದಾನ ಗ್ಯಾರಂಟಿಗಳಿಗೆ ಬಳಸುತ್ತಿಲ್ಲ: ಸಿಎಂ ಸ್ಪಷ್ಟನೆ

ಎನ್ ಡಿ ಆರ್ ಎಫ್ ಅನುದಾನ ಗ್ಯಾರಂಟಿಗಳಿಗೆ ಬಳಸುತ್ತಿಲ್ಲ: ಸಿಎಂ ಸ್ಪಷ್ಟನೆ

ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.

ಬಿಮ್ಸ್ ಆಸ್ಪತ್ರೆ-ಖಾಸಗಿ ನಿರ್ವಹಣೆ ಇಲ್ಲ

ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಲಾಗಿಲ್ಲ ಎಂದರು.

ಕಾಂಗ್ರೆಸ್ ನ ಆಂತರಿಕ ವಿಚಾರದಲ್ಲಿ ಬಿಜೆಪಿ ತಲೆಕೆಡಿಸಿಕೊಳ್ಳಬೇಕಿಲ್ಲ

ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಯವರ ವಿಚಾರದಲ್ಲಿ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments